Headlines

ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ ಜಮೀರ್? ಕಾಂಗ್ರೆಸ್‌ನಲ್ಲಿ ಆಡಿಯೋ ಸಂಚಲನ

ಬೆಂಗಳೂರು/ದಾವಣಗೆರೆ, (ಜೂನ್ 01): ಕಾಂಗ್ರೆಸ್‌ (Congress) ಮುಖಂಡ ಜಮೀರ್ ಅಹಮದ್‌ (Zameer Ahmed) ವಿರುದ್ಧ ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ (Davanagere South byelection) ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್​​ನಲ್ಲಿ ಭಾರೀ ಸಂಚಲನ ಮೂಡಿಸಿದೆ. ದಾವಣಗೆರೆಯ ಕಾಂಗ್ರೆಸ್ ಮುಖಂಡ ಸಿರಾಜ್ ಜೊತೆ ಜಮೀರ್ ಅಹಮ್ಮದ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದಾಗಿದ್ದು, ಆಡಿಯೋದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸಿ ಮಾತನಾಡಲಾಗಿದೆ. ಮುಸ್ಲಿಂ ವೋಟಿಂಗ್ ಕಡಿಮೆ ಇದೆ ಹೊರಗಡೆ ಬಂದ್ರೆ ಅವರನ್ನ ನಂಬೋಕಾಗಲ್ಲ ಕಾಂಗ್ರೆಸ್‌ಗೆ ವೋಟ್ ಹಾಕುತ್ತಾರೆ. ಒತ್ತಾಯ ಮಾಡಿ ಮನೆಯಿಂದ ಕರ್ಕೊಂಡು ಬರಬೇಡಿ. ಪಕ್ಷೇತರರಿಗೆ ಎಸ್‌ಡಿಪಿಐಗೆ ವೋಟ್ ಹಾಕಲಿ ಎಂದು ಜಮೀರ್ ಅಹಮ್ಮದ್ ಹೇಳಿದ್ದಾರೆ.

ಇನ್ನು ಈ ಆಡಿಯೋ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುತ್ತಿದ್ದಂತೆಯೇ ಸ್ವತಃ ಜಮೀರ್ ಅಹಮ್ಮದ್ ಖಾನ್ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದು, ರಾಜ್ಯದ ಕೆಲವು ಮಾಧ್ಯಮಗಳಲ್ಲಿ ಪ್ರಸಾರ ವಾಗುತ್ತಿರುವ ನನ್ನ ಕುರಿತ ಆಡಿಯೋ ನಕಲಿ. ಎಐ ತಂತ್ರಜ್ಞಾನ ಬಳಸಿ ಮಾಡಲಾಗಿದೆ. ಇದೊಂದು ರಾಜಕೀಯ ಷಡ್ಯಂತ್ರ. ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು . ಆಡಿಯೋ ಬಗ್ಗೆ ಯಾವ ತನಿಖೆಗೆ ಬೇಕಾದರೂ ಒಳಪಡಿಸಲಿ. ನಾನು ಆ ರೀತಿ ಮಾತನಾಡಿಲ್ಲ. ಗೊಂದಲ ಉಂಟು ಮಾಡಲು ಇದೆಲ್ಲವೂ ಸೃಷ್ಟಿ ಮಾಡಲಾಗಿದ್ದು, ಇದು ಕಿಡಿಗೇಡಿಗಳ ಕೃತ್ಯ, ಇದನ್ನು ಯಾರೂ ನಂಬಬಾರದು ಎಂದು ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *