ನವದೆಹಲಿ, (ಜೂನ್ 02): ರಾಹುಲ್ ಗಾಂಧಿ ನೀಡಿದ್ದ ರಾಜ್ಯಸಭೆ ಆಫರ್ ತಿರಸ್ಕರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿದ್ದರಾಮಯ್ಯಗೆ (Siddaramaiah) ಹೈಕಮಾಂಡ್ ಮಹತ್ವದ ಹುದ್ದೆಯನ್ನು ನೀಡಿದೆ. ಉದಾರ ಅಂತಕರಣದಿಂದ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಮೂಲಕ ಮುತ್ಸದ್ದಿತನ ತೋರಿದ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (congress working committee )ಸದಸ್ಯ ಸ್ಥಾನ ನೀಡಲಾಗಿದೆ. ಹೌದು… ಸಿದ್ದರಾಮಯ್ಯನವರನ್ನು CWC ಸದಸ್ಯರಾಗಿ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆದೇಶ ಹೊರಡಿಸಿದ್ದಾರೆ. ಈ ಕಾರ್ಯಕಾರಿ ಸಮಿತಿ ಪಕ್ಷದ ಪರಮೋಚ್ಚ ನೀತಿ ನಿರೂಪಣಾ ಮಂಡಳಿಯಾಗಿದ್ದು, ಪಕ್ಷದ ಪ್ರಮುಖ ರಾಜಕೀಯ ಕಾರ್ಯತಂತ್ರಗಳ ಅಂತಿಮ ನಿರ್ಧಾರ ಈ ಸಮಿತಿ ಸಭೆಯಲ್ಲಿ ಆಗಲಿದೆ. ಹೀಗಾಗಿ ಸಿದ್ದರಾಮಯ್ಯನವರಿಗೆ ಮಹತ್ವದ ಸ್ಥಾನಮಾನ ಸಿಕ್ಕಂತಾಗಿದೆ.
ಮುಖ್ಯಾಂಶಗಳು
- ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಕ
- CWC ಸದಸ್ಯರಾಗಿ ಸಿದ್ದರಾಮಯ್ಯರನ್ನು ನೇಮಕ ಮಾಡಿದ ಎಐಸಿಸಿ
- ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಖರ್ಗೆ ಆದೇಶ
ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸಿದ್ದರಾಮಯ್ಯ ಅವರನ್ನು ನೇಮಿಸಲಾಗಿದ್ದು, ಕಾಂಗ್ರೆಸ್‌ನ ಅತ್ಯುನ್ನತ ಕಾರ್ಯಕಾರಿ ಸಮಿತಿ ಇದಾಗಿದ್ದು, ರಾಷ್ಟ್ರಮಟ್ಟದಲ್ಲಿ ಪಕ್ಷದ ನೀತಿ, ಸಂಘಟನೆ, ಪ್ರಚಾರದ ಕುರಿತು ಕೆಲಸ ಮಾಡಲಿದೆ.