Headlines

ಟಿಎಂಸಿಯಲ್ಲಿ ಒಡಕು: 59 ಶಾಸಕರ ಸಹಿಯೊಂದಿಗೆ ವಿಧಾನಸಭೆಗೆ ಆಗಮಿಸಿದ ಉಚ್ಚಾಟಿತ ಶಾಸಕ ರಿತಬ್ರತ ಬ್ಯಾನರ್ಜಿ – Kannada News

ಕೋಲ್ಕತಾ, ಜೂನ್ 03: ಪಶ್ಚಿಮ ಬಂಗಾಳ(West Bengal) ವಿಧಾನಸಭೆಯ ವಿರೋಧ ಪಕ್ಷದ ನಾಯಕರ ನೇಮಕಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ವಲಯದಲ್ಲಿ ಬುಧವಾರ ಭಾರಿ ರಾಜಕೀಯ ಚಟುವಟಿಕೆಗಳು ಕಂಡುಬಂದಿವೆ. ಸೋಭಾಂದೇಬ್ ಚಟ್ಟೋಪಾಧ್ಯಾಯ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಗುರುತಿಸುವಂತೆ ಟಿಎಂಸಿ ಹೈಕಮಾಂಡ್ ಸ್ಪೀಕರ್ ರತೀಂದ್ರ ಬೋಸ್ ಅವರಿಗೆ ಪತ್ರ ಬರೆದ ಬೆನ್ನಲ್ಲೇ, ಪಕ್ಷದಿಂದ ಉಚ್ಚಾಟಿತಗೊಂಡಿರುವ ಶಾಸಕ ರಿತಬ್ರತ ಬ್ಯಾನರ್ಜಿ ಅವರು 59 ಶಾಸಕರ ಸಹಿಯೊಂದಿಗೆ ವಿಧಾನಸಭೆಗೆ ಭೇಟಿ ನೀಡಿರುವುದು ತೀವ್ರ ಕುತೂಹಲ ಮೂಡಿಸಿದೆ.

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಅತ್ಯಂತ ಗಂಭೀರ ಬಿಕ್ಕಟ್ಟನ್ನು ಎದುರಿಸುತ್ತಿದೆ, ಪಕ್ಷದ ಕಾರ್ಯವೈಖರಿ ಮತ್ತು ಪಕ್ಷದಲ್ಲಿ ಆಯ್ದ ಕೆಲವರ ಪ್ರಾಬಲ್ಯದ ವಿರುದ್ಧ ಹಲವಾರು ಪ್ರಮುಖ ಮುಖಗಳು ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿವೆ.

ಮಹಾರಾಷ್ಟ್ರ ಶೈಲಿ ದಂಗೆಯ ವದಂತಿ ಸುಳ್ಳು
ಪಕ್ಷದ ಮಾಜಿ ವಕ್ತಾರ ರಿಜು ದತ್ತಾ ಅವರು ಮಾತನಾಡಿ, ಸುಮಾರು 50 ಟಿಎಂಸಿ ಶಾಸಕರು ರಹಸ್ಯವಾಗಿ ಸಭೆ ಸೇರಿ ಹೊಸ ಬಣ ರಚಿಸಿದ್ದಾರೆ. ಇವರು ಸೋಭಾಂದೇಬ್ ಅವರ ಬದಲಾಗಿ ರಿತಬ್ರತ ಬ್ಯಾನರ್ಜಿ ಅವರನ್ನು ನಾಯಕರನ್ನಾಗಿ ಮಾಡಲು ಮುಂದಾಗಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದರು. ಇದು ಟಿಎಂಸಿಯಲ್ಲಿ ಮಹಾರಾಷ್ಟ್ರ ಮಾದರಿಯ ಬಿರುಕು ಉಂಟಾಗಲಿದೆ ಎಂಬ ವದಂತಿಗಳಿಗೆ ಕಾರಣವಾಗಿತ್ತು.

ಮತ್ತಷ್ಟು ಓದಿ: ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ; ಪ್ರತಿಭಟನೆಯಲ್ಲಿ ಕೇವಲ 5 ಶಾಸಕರು, 3 ಸಂಸದರು ಭಾಗಿ

ಆದರೆ, ಈ ಎಲ್ಲಾ ಹೇಳಿಕೆಗಳನ್ನು ಶಾಸಕರಾದ ರಿತಬ್ರತ ಬ್ಯಾನರ್ಜಿ ಬಲವಾಗಿ ನಿರಾಕರಿಸಿದ್ದಾರೆ. ತಮ್ಮ ನಾಯಕತ್ವದಲ್ಲಿ ಯಾವುದೇ ಬಂಡಾಯದ ಬಣ ಸೃಷ್ಟಿಯಾಗಿಲ್ಲ. ಇಂತಹ ವರದಿಗಳು ಸಂಪೂರ್ಣ ಸುಳ್ಳು ಮತ್ತು ಆಧಾರರಹಿತವಾಗಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ತಮ್ಮ ವಿರುದ್ಧ ತಪ್ಪು ಮಾಹಿತಿ ಹರಡುವುದನ್ನು ಮುಂದುವರಿಸಿದರೆ ಮಾನನಷ್ಟ ಮೊಕದ್ದಮೆ ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಬ್ಯಾನರ್ಜಿ ಎಚ್ಚರಿಸಿದ್ದಾರೆ.

ಘಟನೆ ಹಿನ್ನೆಲೆ ಏನು?
ಪಕ್ಷದ ಮುಖ್ಯ ಸಚೇತಕ ಮತ್ತು ಶಾಸಕಾಂಗ ನಾಯಕರ ನಾಮನಿರ್ದೇಶನಕ್ಕೆ ಸಂಬಂಧಿಸಿದ ಸಹಿ ಪ್ರಕ್ರಿಯೆಯನ್ನು ಸಾರ್ವಜನಿಕವಾಗಿ ಪ್ರಶ್ನಿಸಿದ್ದಕ್ಕಾಗಿ ರಿತಬ್ರತ ಬ್ಯಾನರ್ಜಿ ಮತ್ತು ಸಹ ಶಾಸಕ ಸಂದೀಪನ್ ಸಹಾ ಅವರನ್ನು ಒಂದು ದಿನದ ಮುಂಚಿತವಾಗಿ ಪಕ್ಷದಿಂದ ಹೊರಹಾಕಲಾಗಿತ್ತು.

ಇತ್ತೀಚಿನ ಚುನಾವಣಾ ಫಲಿತಾಂಶಗಳ ನಂತರ ಪಕ್ಷದಲ್ಲಿ ಆಯ್ದ ಕೆಲವರ ಪ್ರಾಬಲ್ಯದ ವಿರುದ್ಧ ಕೆಲವು ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿರುವುದು ನಿಜವಾದರೂ, ಸದ್ಯಕ್ಕೆ ಟಿಎಂಸಿಯಲ್ಲಿ ಯಾವುದೇ ದೊಡ್ಡ ಒಡಕು ಮೂಡಿಲ್ಲ ಎಂದು ನಾಯಕರು ಸ್ಪಷ್ಟಪಡಿಸಿದ್ದಾರೆ. ಸದ್ಯಕ್ಕೆ ಪರಿಸ್ಥಿತಿಯನ್ನು ನಿಯಂತ್ರಿಸಲು ಪಕ್ಷದ ಹೈಕಮಾಂಡ್ ಹಾನಿ ನಿಯಂತ್ರಣ ಕ್ರಮಗಳಿಗೆ ಮುಂದಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *