ಸಿಎಂ ಆಗುವ ಮುನ್ನವೇ ಡಿಕೆಶಿ ತಂತ್ರಗಾರಿಕೆ: ರಾಜಕೀಯ ಬದ್ಧವೈರಿಗಳ ಭೇಟಿ ಹಿಂದಿನ ಲೆಕ್ಕಾಚಾರವೇನು? – Kannada News

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದ್ರೆ, ಅಧಿಕಾರ ಸ್ವೀಕಾರ ಮುನ್ನ ಡಿಕೆ ಶಿವಕುಮಾರ್ ಅವರು ರಾಜ್ಯದ ಇಬ್ಬರು ಪ್ರಭಾವಿ ಜಾತಿ ಸಮುದಾಯಗಳ ಪ್ರಶ್ನಾತೀತ ನಾಯಕರನ್ನು ಭೇಟಿ ಮಾಡಿದ್ದಾರೆ. ಹೌದು.. ರಾಜ್ಯದ ಇಬ್ಬರು ಧೀಮಂತ ಮುತ್ಸದ್ದಿ ನಾಯಕರಾದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಇದರೊಂದಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಹೆಜ್ಜೆ ಇಟ್ಟಿದ್ದಾರೆ.  ರಾಜಕೀಯ ಬದ್ಧವೈರಿಗಳ ಭೇಟಿಯ ಹಿಂದೆ ಕೇವಲ ಸೌಜನ್ಯ ಮಾತ್ರವಲ್ಲ ಬದಲಿಗೆ ಅತ್ಯಂತ ವ್ಯವಸ್ಥಿತವಾದ ದೂರದೃಷ್ಠಿಯ ರಾಜಕೀಯ ಲೆಕ್ಕಾಚಾರವೂ ಸಹ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *