10 ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ಗೆ ಕ್ಷಣಗಣನೆ ಆರಂಭವಾಗಿದೆ. ಜೂನ್ 12 ರಿಂದ ಜುಲೈ 5 ರವರೆಗೆ ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯದಲ್ಲಿ ಈ ಪಂದ್ಯಾವಳಿ ನಡೆಯಲಿದೆ. 24 ದಿನಗಳ ಈ ಪಂದ್ಯಾವಳಿಯಲ್ಲಿ ಹನ್ನೆರಡು ತಂಡಗಳು ಭಾಗವಹಿಸಲಿದ್ದು, ಒಟ್ಟು 33 ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಉದ್ಘಾಟನಾ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಭಾರತ ಜೂನ್ 14 ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಬಾರಿ, ಪಂದ್ಯಾವಳಿಯ ಒಟ್ಟು ಬಹುಮಾನದ ಹಣವನ್ನು 83ಕೋಟಿ ರೂ.ಗೆ ಏರಿಸಲಾಗಿದೆ ಎಂಬುದು ಗಮನಿಸಬೇಕಾದ ಸಂಗತಿಯಾಗಿದೆ.
- ಹಿಂದಿನ ಆವೃತ್ತಿಗೆ ಹೋಲಿಸಿದರೆ ಒಟ್ಟು ಬಹುಮಾನದ ಹಣವನ್ನು ಶೇಕಡಾ 10 ರಷ್ಟು ಹೆಚ್ಚಿಸಲಾಗಿದೆ.
- ಯುಎಇಯಲ್ಲಿ ನಡೆದ ಕಳೆದ ಮಹಿಳಾ ಟಿ20 ವಿಶ್ವಕಪ್ನ ಒಟ್ಟು ಬಹುಮಾನದ ಮೊತ್ತ 74 ಕೋಟಿ ರೂ.ಗಳಾಗಿತ್ತು.
- ಈ ಬಾರಿಯ ಟಿ20 ವಿಶ್ವಕಪ್ನಲ್ಲಿ 12 ತಂಡಗಳು ಭಾಗವಹಿಸಲಿವೆ.
- ಕಳೆದ ಆವೃತ್ತಿಯ ಪಂದ್ಯಾವಳಿಯಲ್ಲಿ 10 ತಂಡಗಳು ಭಾಗವಹಿಸಿದ್ದವು.
- ಭಾಗವಹಿಸುವ 12 ತಂಡಗಳು ಕನಿಷ್ಠ 2.06 ಕೋಟಿ ರೂಪಾಯಿಗಳ ಖಚಿತ ಬಹುಮಾನ ಹಣವನ್ನು ಪಡೆಯುತ್ತವೆ.
- ಭಾರತ ತಂಡ ಜೂನ್ 14 ರಂದು ಪಾಕಿಸ್ತಾನ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.
- 2026 ರ ಪುರುಷರ ಟಿ20 ವಿಶ್ವಕಪ್ ವಿಜೇತ ತಂಡಕ್ಕೆ 25 ಕೋಟಿ ರೂಪಾಯಿಗಳನ್ನು ನೀಡಲಾಗಿತ್ತು.
12 teams, seven venues, one ultimate prize 🏆
A comprehensive guide to the biggest-ever Women’s #T20WorldCup 📋https://t.co/g5aDUKWFDK
— ICC (@ICC) June 4, 2026
ಯಾರಿಗೆ ಎಷ್ಟು ಬಹುಮಾನ ಸಿಗಲಿದೆ?
- ವಿಜೇತ ತಂಡಕ್ಕೆ: 21.8 ಕೋಟಿ ರೂ.
- ರನ್ನರ್ ಅಪ್ ತಂಡಕ್ಕೆ: 10 ಕೋಟಿ ರೂ.
- ಸೆಮಿಫೈನಲಿಸ್ಟ್ ತಂಡಗಳಿಗೆ: 6.29 ಕೋಟಿ ರೂ.
- ಗುಂಪು ಪಂದ್ಯಗಳನ್ನು ಗೆದ್ದ ತಂಡಗಳಿಗೆ: 29 ಲಕ್ಷ ರೂ.
ಭಾರತದ ವೇಳಾಪಟ್ಟಿ
- ಜೂನ್ 14 ರಂದು ಪಾಕಿಸ್ತಾನ ವಿರುದ್ಧ
- ಜೂನ್ 17 ರಂದು ನೆದರ್ಲ್ಯಾಂಡ್ಸ್ ವಿರುದ್ಧ
- ಜೂನ್ 21 vs ದಕ್ಷಿಣ ಆಫ್ರಿಕಾ ವಿರುದ್ಧ
- ಜೂನ್ 25 ರಂದು ಬಾಂಗ್ಲಾದೇಶ ವಿರುದ್ಧ
- ಜೂನ್ 28 ರಂದು ಆಸ್ಟ್ರೇಲಿಯಾ ವಿರುದ್ಧ
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ