ವನ್ಯಜೀವಿ ಬೇಟೆಗಾರರನ್ನು ಬಂಧಿಸಲು ಹೋದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ! ನಾಲ್ವರ ಬಂಧನ – Kannada News

ವನ್ಯಜೀವಿ ಬೇಟೆಗಾರರನ್ನು ಬಂಧಿಸಲು ಹೋದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ!

ಯಾದಗಿರಿ, ಜೂನ್ 05: ಕಾಡುಹಂದಿ ಬೇಟೆಯಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಆರೋಪಿಗಳನ್ನು ಬಂಧಿಸಲು ಹೋಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಬೇಟೆಗಾರರ ಗ್ಯಾಂಗ್ ಭೀಕರ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ (Yadagiri) ಸುರಪುರ ತಾಲೂಕಿನ ಕಕ್ಕೇರ ಬಳಿಯ ಅರಣ್ಯ ಪ್ರದೇಶದಲ್ಲಿ ಮೂರು ದಿನಗಳ ಹಿಂದೆ ಈ ಕೃತ್ಯ ನಡೆದಿದೆ.

ಮುಖ್ಯಾಂಶಗಳು

  • ಕಾಡುಹಂದಿ ಬೇಟೆಯಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದ ಕಿಡಿಗೇಡಿಗಳ ಬಂಧನಕ್ಕೆ ಹೋದಾಗ ಹಲ್ಲೆ.
  • ಆರ್‌ಎಫ್‌ಒ ಸೇರಿ ಮೂವರು ಅಧಿಕಾರಿಗಳನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಗಳಿಂದ ಭೀಕರ ಹಲ್ಲೆ.
  • ಕೊಡೇಕಲ್ ಠಾಣೆಯಲ್ಲಿ 11 ಜನರ ವಿರುದ್ಧ ಕೇಸ್; ನಾಲ್ವರ ಬಂಧನ, ಆಸ್ಪತ್ರೆಗೆ ಆರ್‌ಎಫ್‌ಒ ದಾಖಲು.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ವೀಡಿಯೋ

ಆರೋಪಿಗಳು ಕಾಡುಹಂದಿಯನ್ನು ಬೇಟೆಯಾಡಿ ಆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡಿದ್ದರು. ಇದರ ಆಧಾರದ ಮೇಲೆ ದಾಳಿ ನಡೆಸಿದ ಆರ್‌ಎಫ್‌ಒ (RFO) ಭಾಗಪ್ಪಗೌಡ, ಗಸ್ತುಪಾಲಕರಾದ ಲಾಲ್ ಅಹ್ಮದ್ ಹಾಗೂ ಕಾಶಿನಾಥ್ ರಾಠೋಡ್ ಅವರನ್ನೇ ಬೇಟೆಗಾರರ ಜಾಲ ಹಿಡಿದು ಕೂಡಿಹಾಕಿದೆ. ಅಧಿಕಾರಿಗಳನ್ನು ಜಾಲಿ ಗಿಡಕ್ಕೆ ಕಟ್ಟಿಹಾಕಿ, ದೊಣ್ಣೆಗಳಿಂದ ಮನಬಂದಂತೆ ಹಲ್ಲೆ ನಡೆಸಲಾಗಿದೆ. ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಆರ್‌ಎಫ್‌ಒ ಭಾಗಪ್ಪಗೌಡ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಮರುಕಳಿಸದ ಘಟನೆಗೆ ಸಂಬಂಧಿಸಿದಂತೆ ಕೊಡೇಕಲ್ ಪೊಲೀಸ್ ಠಾಣೆಯಲ್ಲಿ ಒಟ್ಟು 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆ ನಡೆಸಿರುವ ಪೊಲೀಸರು ಸದ್ಯ ನಾಲ್ಕು ಮಂದಿ ಪ್ರಮುಖ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದು, ತಲೆಮರೆಸಿಕೊಂಡಿರುವ ಉಳಿದ ಖದೀಮರಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *