ನ್ಯೂ ಚಂಡೀಗಢದ ಮುಲ್ಲನ್ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯದವನ್ನು ನಿರೀಕ್ಷಿಸಿದ್ದಂತೆಯೇ ಆತಿಥೇಯ ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ಪೂರ್ಣ ಮೂರು ದಿನವೂ ನಡೆಯದ ಈ ಪಂದ್ಯದಲ್ಲಿ ಗಿಲ್ ಪಡೆ ಇನ್ನಿಂಗ್ಸ್ ಜಯ ದಾಖಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 8 ವಿಕೆಟ್ ಕಳೆದುಕೊಂಡು 564 ರನ್ಗಳಿಸಿ ತನ್ನ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಇದಾದ ಬಳಿಕ ಬ್ಯಾಟಿಂಗ್ ಆರಂಭಿಸಿದ ಅಫ್ಘಾನಿಸ್ತಾನ 152 ರನ್ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿತು. ಹೀಗಾಗಿ ಮೊದಲ ಇನ್ನಿಂಗ್ಸ್ನಲ್ಲಿ 412 ರನ್ಗಳ ಮುನ್ನಡೆ ಸಾಧಿಸಿದ್ದ ಭಾರತ ಫಾಲೋ ಆನ್ ಹೇರಿತು. ಆದ್ದರಿಂದ ಮತ್ತೆ ಬ್ಯಾಟಿಂಗ್ಗೆ ಇಳಿದ ಅಫ್ಘನ್ ಪಡೆ 112 ರನ್ಗಳಿಗೆ ಆಲೌಟ್ ಆಗುವ ಮೂಲಕ ಇನ್ನಿಂಗ್ಸ್ ಮತ್ತು 300 ರನ್ಗಳ ಹೀನಾಯ ಸೋಲು ಅನುಭವಿಸಿತು.
Published On – 3:04 pm, Mon, 8 June 26