ರಾಯಚೂರು, ಜೂನ್ 10): ಡಿಕೆ ಶಿವಕುಮಾರ್ ಸರ್ಕಾರದ ಸಂಪುಟ ವಿಸ್ತರಣೆ ಆಗಬೇಕಿದ್ದು, ಬಾಕಿ ಇರುವ 20 ಸಚಿವ ಸ್ಥಾನಗಳಿಗೆ ಬರೋಬ್ಬರಿ 40 ಆಕಾಂಕ್ಷಿಗಳು ಲಾಬಿ ಮಾಡುತ್ತಿದ್ದಾರೆ. ಕೆಲವರು ದೆಹಲಿಯಲ್ಲಿ ಮಂತ್ರಿ ಸ್ಥಾನಕ್ಕೆ ತೀವ್ರ ಕಸರತ್ತು ನಡೆಸಿದ್ದಾರೆ. ಇನ್ನೊಂದೆಡೆ ಅವರ ಬೆಂಬಲಿಗರು ಕ್ಷೇತ್ರದಲ್ಲಿ ಪ್ರತಿಭಟನೆಗಳಿದಿದ್ದಾರೆ. ಇದಕ್ಕೆ ಪೂರಕವೆಂಬಂತೆ ರಾಯಚೂರು ಜಿಲ್ಲೆ ಸಿಂಧನೂರು ಕ್ಷೇತ್ರದ ಹಿರಿಯ ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಆಗ್ರಹಿಸಿದ್ದಾರೆ. ಇನ್ನು ಹಂಪನಗೌಡ ಬಾದರ್ಲಿಗೆ ಮತ್ರಿ ಸ್ಥಾನ ಕರುಣಿಸಲಿ ಎಂದು ಅವರ ಅಭಿಮಾನಿಗಳು, ಗಾಳಿ ದುರ್ಗಮ್ಮ ದೇವಸ್ಥಾನದವರೆಗೆ ಪಾದಯಾತ್ರೆ ನಡೆಸಿದ್ದು, ತಮ್ಮ ನಾಯಕನಿಗೆ ಸಚಿವ ಸ್ಥಾನ ಸಿಗಲಿ ಎಂದು ಶಕ್ತಿ ದೇವತೆ ಗಾಳಿ ದುರ್ಗಮ್ಮಗೆ 101 ತೆಂಗಿನಕಾಯಿ ಒಡೆದ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದ್ದಾರೆ. ಇನ್ನು ಈ ಬಗ್ಗೆ ನಮ್ಮ ರಾಯಚೂರು ಜಿಲ್ಲಾ ಪ್ರತಿನಿಧಿ ಭೀಮೇಶ್ ನೀಡಿರೋ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.