ಮಾತಾಡಬೇಕಿರೋದು ಮಾತಾಡಿದ್ದೇನೆ, ಎಲ್ಲವನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ: ಮಹತ್ವದ ಹೇಳಿಕೆ ನೀಡಿದ ಡಿಕೆಶಿ – Kannada News

ದೆಹಲಿ, ಜೂ.10: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಇಂದು (ಜೂ.10) ಕಾಂಗ್ರೆಸ್​​​ ನಾಯಕರನ್ನು ಭೇಟಿಯಾಗಿದ್ದಾರೆ. ನಾಳೆ (ಜೂ.11) ಪ್ರಧಾನಿ ಮೋದಿ ಅವರನ್ನು ಕೂಡ ಭೇಟಿಯಾಗಲಿದ್ದಾರೆ. ಇದರ ನಡುವೆ ಅವರು ರಾಜ್ಯ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿದ್ದಾರೆ. “ನಾನು ಏನು ಮಾತನಾಡಬೇಕೋ ಅದನ್ನು ಮಾತನಾಡಿದ್ದೇನೆ. ಆದರೆ ಎಲ್ಲವನ್ನೂ ಈಗ ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ಯಾರೊಂದಿಗೆ ಮಾತನಾಡಬೇಕೋ, ಏನು ಹೇಳಬೇಕೋ ಆ ಎಲ್ಲ ವಿಚಾರಗಳನ್ನು ಸೂಕ್ತ ವೇದಿಕೆಯಲ್ಲಿ ಈಗಾಗಲೇ ತಿಳಿಸಲಾಗಿದೆ ಎಂದು ಹೇಳಿದ್ದಾರೆ. “ನಾನೊಬ್ಬ ಕಾಂಗ್ರೆಸ್ ಕಾರ್ಯಕರ್ತ. ಕಾರ್ಯಕರ್ತನಾಗಿ ಕಾರ್ಯಕರ್ತರಿಗೆ ನ್ಯಾಯ ಕೊಡಿಸುವಂತಹ ಪ್ರಯತ್ನವನ್ನು ಮಾಡಿದ್ದೇನೆ” ಎಂದು ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಅಥವಾ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ, ತಾವು ಮಾಡಬೇಕಾದ ಮಾತುಕತೆಗಳನ್ನು ಮಾಡಿದ್ದೇವೆ ಎಂದು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *