
ಕೇಂದ್ರದಲ್ಲಿ NDA ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿ ಎನ್ಡಿಎ ನಾಯಕರ ಜೊತೆ ಸಾಲು ಸಾಲು ಸಭೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ತನ್ನದೇ ಆದ ರಾಜಕೀಯ ಲೆಕ್ಕಾಚಾರಗಳನ್ನು ಹಾಕುತ್ತಿದ್ದು, ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಪ್ರಧಾನ ಕಾರ್ಯದರ್ಶಿಗಳ ಜೊತೆಗಿನ ಸಭೆ ಕುತೂಹಲ ಮೂಡಿಸಿದೆ. ಇತ್ತ ಕರ್ನಾಟಕದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆ ಕಸರತ್ತು ಮುಂದುವರಿದಿದ್ದು, ಸಚಿವಾಕಾಂಕ್ಷಿಗಳಿಂದ ಲಾಬಿ ಜೋರಾಗಿದೆ. ಯುವ ಮುಖಗಳಿಗೆ ಹೈಕಮಾಂಡ್ ಪ್ರಾಧಾನ್ಯತೆ ನೀಡಬಹುದೆಂಬ ಬಗ್ಗೆಯೂ ಮಾತುಗಳು ಕೇಳಿಬಂದಿವೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.