ಬೆಂಗಳೂರು, (ಜೂನ್.11): ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಯಲ್ಲಿ (Karnataka legislative council Election) ಕಾಂಗ್ರೆಸ್ (Congress) ಅಭ್ಯರ್ಥಿ ಮಳವಳ್ಳಿ ಶಿವಣ್ಣ (Malavalli Shivanna) ಅವರು ಕ್ರಿಮಿನಲ್ ಪ್ರಕರಣಗಳನ್ನು ಮುಚ್ಚಿ ಹಾಕಿದ್ದಾರೆ ಎಂದು ಜೆಡಿಎಸ್ ದೂರು ನೀಡಿದೆ. ತಮ ಮೇಲೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಅಫಿಡವಿಟ್ನಲ್ಲಿ ಮಳವಳ್ಳಿ ಶಿವಣ್ಣ ಮುಚ್ಚಿಹಾಕಿದ್ದಾರೆ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ಬಿಜೆಪಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಗೋವಿಂದರಾಜು ಚುನಾವಣಾಧಿಕಾರಿ ಹಾಗೂ ವಿಧಾನಸಭಾ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ದೂರು ನೀಡಿದ್ದಾರೆ.
ಮುಖ್ಯಾಂಶಗಳು
- ಪರಿಷತ್ ಚುನಾವಣೆ ‘ಕೈ’ ಅಭ್ಯರ್ಥಿ ಮಳವಳ್ಳಿ ಶಿವಣ್ಣ ವಿರುದ್ಧ ಮಾಹಿತಿ ಮುಚ್ಚಿಟ್ಟ ಆರೋಪ
- ಚುನಾವಣಾಧಿಕಾರಿಗೆ ದೂರು ನೀಡಿದ JDS ಅಭ್ಯರ್ಥಿ ಗೋವಿಂದರಾಜು
- ಮಳವಳ್ಳಿ ಶಿವಣ್ಣ ನಾಮಪತ್ರ ತಿರಸ್ಕೃತ ಮಾಡುವಂತೆ ಚುನಾವಣಾಧಿಕಾರಿಗೆ ದೂರು
- ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ನೀಡಿದ ಮಳವಳ್ಳಿ ಶಿವಣ್ಣ
- ತಮ್ಮ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ ಎಂದು ಸ್ಪಷ್ಟನೆ
ಆರೋಪದಲ್ಲೇನಿದೆ?
ಮಳವಳ್ಳಿ ಶಿವಣ್ಣ ವಿರುದ್ಧ ಒಟ್ಟು ನಾಲ್ಕು ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಇದು ಅಫಿಡವಿಟ್ನಲ್ಲಿ ಹಾಕಬೇಕೆಂಬ ನಿಯಮವಿಲ್ಲ ಎಂದು ಮುಚ್ಚಿಹಾಕಿದ್ದಾರೆ. ಅಫಿಡವಿಟ್ನಲ್ಲಿ ಯಾವುದೇ ಅಭ್ಯರ್ಥಿಗಳು ತಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಕಡ್ಡಾಯವಾಗಿ ನಮೂದಿಸಬೇಕು. ಆದ್ರೆ, ಇಲ್ಲಿ ಅಭ್ಯರ್ಥಿಯು ಮುಚ್ಚಿ ಹಾಕಿರುವುದರಿಂದ ಇದೊಂದು ಗಂಭೀರ ಸ್ವರೂಪದ ಪ್ರಕರಣವಾಗಿರುವುದ್ದು, ಅವರ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ದೂರು ಸ್ವೀಕರಿಸಿರುವ ಚುನಾವಣಾಧಿಕಾರಿ ಈ ಬಗ್ಗೆ ಪರಿಶೀಲಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಇದನ್ನೂ ನೋಡಿ: ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಆರೋಪಕ್ಕೆ ಮಳವಳ್ಳಿ ಶಿವಣ್ಣ ಸ್ಪಷ್ಟನೆ
ಇನ್ನು ಈ ಆರೋಪ ಕೇಳಿಬರುತ್ತಿದ್ದಂತೆಯೇ ಕಾಂಗ್ರೆಸ್ ಅಭ್ಯರ್ಥಿ ಮಳವಳ್ಳಿ ಶಿವಣ್ಣ ಪ್ರತಿಕ್ರಿಯಿಸಿದ್ದು, ಸೋಲಿನ ಭೀತಿಯಿಂದ ಗೋವಿಂದರಾಜು ಹುನ್ನಾರ ಮಾಡುತ್ತಿದ್ದಾರೆ. ನನ್ನ ವಿರುದ್ಧ ಯಾವುದೇ ಕೇಸ್ಗಳು ಇಲ್ಲ. ನಾಲ್ಕು ಕೇಸ್ಗಳ ಬಗ್ಗೆ ನಾನು ದೂರು ಕೊಟ್ಟಿರುವುದು. ಎಂಎಲ್ಸಿ ಹೆಚ್.ವಿಶ್ವನಾಥ್ ವಿರುದ್ಧ ನಾನು ದೂರು ನೀಡಿದ್ದೆ. ವೋಟ್ ಚೋರಿ ಹೋಗಿ ಈಗ ಸೀಟ್ ಚೋರಿ ಮಾಡಲು ಹೋಗುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಎಂಎಲ್ಸಿ ಹೆಚ್.ವಿಶ್ವನಾಥ್ ನನ್ನ ವಿರುದ್ಧ ಹುನ್ನಾರ ಮಾಡಿದ್ದು, ಗೋವಿಂದರಾಜುಗೆ ಎಂಎಲ್ಸಿ ಹೆಚ್.ವಿಶ್ವನಾಥ್ ಹೇಳಿ ಕಳುಹಿಸಿದ್ದಾರೆ. ನನ್ನ ವಿರುದ್ಧ ಒಂದು ಎಫ್ಐಆರ್ ಸಹ ದಾಖಲಾಗಿಲ್ಲ. ಹುನ್ನಾರಕ್ಕೆ ಸೊಪ್ಪು ಹಾಕಲ್ಲ, ಪರಿಷತ್ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಸ್ಪಷ್ಟಪಡಿಸಿರು.