ಬೆಂಗಳೂರು, (ಜುನ್ 11): ಕರ್ನಾಟಕದ (Karnataka) ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಅಂದರೆ ಇಂದಿನಿಂದ ಜೂನ್ 15ರವರೆಗೆ ವ್ಯಾಪಕ ಮಳೆಯಾಗುವ (Monsoon Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ (South) ಜಾಗೂ ಉತ್ತರ ಒಳನಾಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಪ್ರಮುಖ ಜಿಲ್ಲೆಗಳ ಹವಾಮಾನ ಮುನ್ಸೂಚನೆ
ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮುಂಗಾರು ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. #KSNDMC #ಎಚ್ಚರಿಕೆವಹಿಸಿ
Next 5 days #SouthwestMonsoon #Rainfall #forecast maps for #Karnataka state with district-wise warnings.
Source: @Indiametdept @KarnatakaVarthe #KarnataKaRains pic.twitter.com/gxs4qN6tBc— Karnataka State Natural Disaster Monitoring Centre (@KarnatakaSNDMC) June 11, 2026
ಕರಾವಳಿ ಕರ್ನಾಟಕ: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಡಲ ತೀರದಲ್ಲಿ ಗಂಟೆಗೆ 30-40 ಕಿ.ಮೀ ಗಾಳಿಯ ವೇಗ ಇರಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
#ಮಳೆ #ಮುನ್ನೆಚ್ಚರಿಕೆ : #Heavy #Rainfall (64.5mm to 115.4mm) #warning for #Karnataka #Yellow #alert@KarnatakaVarthe #KSNDMC #KarnatakaRains #SouthWestMonsoon #Monsoon2026 pic.twitter.com/6alvY53uLs
— Karnataka State Natural Disaster Monitoring Centre (@KarnatakaSNDMC) June 11, 2026
ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದ ತುಮಕೂರು, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗ ಜಿಲ್ಲೆಗಳ ಲ್ಲಿ ಭಾರಿ ಮಳೆ ಹಾಗೂ ನಿರಂತರ ಗಾಳಿ (ಗಂಟೆಗೆ 30-40 ಕಿ.ಮೀ) ಬೀಸುವ ಸಾಧ್ಯತೆಯಿದೆ. ಇನ್ನು ಬಳ್ಳಾರಿ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆ ಹಾಗೂ ನಿರಂತರ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.
#Forecast for #Bengaluru City:
Generally cloudy sky. Light to moderate rain with sustained wind (30-40 kmph) likely at one or two places.@GBAChiefComm @GBA_office @BBMPSWMSplComm @CPBlr #BBMP #BengaluruRains #KSNDMC— Karnataka State Natural Disaster Monitoring Centre (@KarnatakaSNDMC) June 11, 2026
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರುತ್ತದೆ. ಅಲ್ಲೊಂದು ಇಲ್ಲೊಂದು ಕಡೆಗಳಲ್ಲಿ ಗಂಟೆಗೆ 30ರಿಂದ40 ಕಿ.ಮೀ. ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.