ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ಶುಭ್ಮನ್ ಗಿಲ್ ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಮಳೆ ಬಾಧಿತ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 21.2 ಓವರ್ಗಳಲ್ಲಿ 182 ರನ್ಗಳಿಸಿ 7 ವಿಕೆಟ್ ಕಳೆದುಕೊಂಡಿತ್ತು.
ಈ ವೇಳೆ ಕ್ರೀಸ್ಗೆ ಆಗಮಿಸಿದ ಅಲ್ಲಾ ಗಝನ್ಫರ್ ಹರ್ಷ್ ದುಬೆ ಎಸೆದ ಎಸೆತವನ್ನು ಲೆಗ್-ಸೈಡ್ ಕಡೆಗೆ ಬಲವಾಗಿ ಬ್ಯಾಟ್ ಬೀಸಲು ಯತ್ನಿಸಿದರು. ಬ್ಯಾಟ್‌ನ ಮೇಲ್ಭಾಗದ ಅಂಚಿಗೆತಗುಲಿದ ಚೆಂಡು, ವಿಕೆಟ್ ಕೀಪರ್‌ನನ್ನೂ ಮೀರಿ ವೇಗವಾಗಿ ಹಿಂದಕ್ಕೆ ಹಾರಿತು.
ಮೊದಲ ಸ್ಲಿಪ್‌ನಲ್ಲಿ ನಿಂತಿದ್ದ ನಾಯಕ ಶುಭ್ಮನ್ ಗಿಲ್, ಕ್ಷಣಾರ್ಧದಲ್ಲಿ ಗಾಳಿಯಲ್ಲಿ ಜಿಗಿದು ಕೇವಲ ತಮ್ಮ ಎಡಗೈಯಿಂದ ಅದ್ಭುತವಾಗಿ ಚೆಂಡನ್ನು ಹಿಡಿದರು. ಈ ಕ್ಯಾಚ್ ನೋಡಿ ಟೀಮ್ ಇಂಡಿಯಾ ಆಟಗಾರರು ಹಾಗೂ ಪ್ರೇಕ್ಷಕರು ಆಶ್ಚರ್ಯಚಕಿತರಾದರು.
ಇದೀಗ ಈ ಅಸಾಧಾರಣ ಕ್ಯಾಚ್ ವಿಡಿಯೋ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಭಾರತೀಯ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಇದು ಅತ್ಯುತ್ತಮ ಸ್ಲಿಪ್ ಕ್ಯಾಚ್‌ಗಳಲ್ಲಿ ಒಂದಾಗಿದೆ ಎಂದು ಅಭಿಮಾನಿಗಳು ಮತ್ತು ವಿಶ್ಲೇಷಕರು ಶ್ಲಾಘಿಸುತ್ತಿದ್ದಾರೆ.
What. A. Catch 🤯
Captain Shubman Gill with an absolute stunner of a grab 🫡
Updates ▶️ https://t.co/lCuohEZYAl #TeamIndia | #INDvAFG | @IDFCFIRSTBank | @ShubmanGill pic.twitter.com/jX2rAfSbtq
— BCCI (@BCCI) June 13, 2026
ಗೆದ್ದು ಬೀಗಿದ ಟೀಮ್ ಇಂಡಿಯಾ:
ಮಳೆಯ ಕಾರಣ 25 ಓವರ್ಗಳಲ್ಲಿ ಸೀಮಿತವಾಗಿದ್ದ ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ಪರ ಆರಂಭಿಕ ದಾಂಡಿಗ ರಹಮಾನುಲ್ಲಾ ಗುರ್ಬಾಝ್ (102) ಭರ್ಜರಿ ಶತಕ ಸಿಡಿಸಿದರು.
ಗುರ್ಬಾಝ್ ಔಟಾಗುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ ಅಫ್ಘಾನಿಸ್ತಾನ್ ತಂಡವು 24.5 ಓವರ್ಗಳಲ್ಲಿ 194 ರನ್ಗಳಿಸಿ ಸರ್ವಪತನ ಕಂಡಿತು.
ಇದನ್ನೂ ಓದಿ: ಕೆಎಲ್ ರಾಹುಲ್ ಸಿಕ್ಸ್ಗೆ ಬೆರಗಾದ ಗೌತಮ್ ಗಂಭೀರ್!
195 ರನ್ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ಶುಭ್ಮನ್ ಗಿಲ್ ಅಜೇಯ 84 ರನ್ ಬಾರಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ ಕೇವಲ 19 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ ಸ್ಫೋಟಕ 39 ರನ್ ಚಚ್ಚಿದರು. ಈ ಮೂಲಕ ಟೀಮ್ ಇಂಡಿಯಾ 22.5 ಓವರ್ಗಳಲ್ಲಿ 195 ರನ್ಗಳಿಸಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
Published On – 8:25 am, Sun, 14 June 26