ಬೆಂಗಳೂರು, ಜೂನ್ 14: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ನಿರ್ವಹಣೆ ಬಗ್ಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ಸಾಕಷ್ಟು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿತ್ತು. ಆದರೆ, ಈಗ ಗ್ಯಾರಂಟಿಗಳು ಸರಿಯಾಗಿ ತಲುಪುತ್ತಿಲ್ಲ ಮತ್ತು ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದು ಅವರು ಆರೋಪಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯನ್ನು 4-5 ತಿಂಗಳುಗಳ ಕಾಲ ತಡೆಹಿಡಿದು, ಚುನಾವಣೆ ಬಂದಾಗ ಚುನಾವಣಾ ಲಕ್ಷ್ಮಿಯನ್ನಾಗಿ ಪರಿವರ್ತಿಸಲಾಗುತ್ತಿದೆ. ಅಲ್ಲದೆ, ಗ್ಯಾರಂಟಿಗಳಿಂದ ಉಂಟಾದ ಆರ್ಥಿಕ ಸಂಕಷ್ಟವನ್ನು ನಿಭಾಯಿಸಲು ಲಕ್ಷಾಂತರ ಫಲಾನುಭವಿಗಳನ್ನು ಕಡಿತಗೊಳಿಸುವ ದುಸ್ಸಾಹಸಕ್ಕೆ ಸರ್ಕಾರ ಕೈ ಹಾಕಿದೆ ಎಂದು ಅವರು ಟೀಕಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.