ಚಾಮರಾಜನಗರ, ಜೂನ್ 15: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪವಿತ್ರ ಪುಣ್ಯಕ್ಷೇತ್ರವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಭಕ್ತರ ಮಹಾಪೂರವೇ ಹರಿದುಬಂದಿದೆ. ಸಾಮಾನ್ಯವಾಗಿ ಪ್ರತಿ ಸೋಮವಾರದಂದು ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗುತ್ತವೆ. ಆದರೆ, ಈ ಬಾರಿ ಸೋಮವಾರದಂದೇ ಅಮಾವಾಸ್ಯೆ ಒದಗಿ ಬಂದಿರುವುದರಿಂದ ಮಾದಪ್ಪನ ದರ್ಶನ ಪಡೆಯಲು ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತರು ಬೆಟ್ಟಕ್ಕೆ ಆಗಮಿಸಿದ್ದಾರೆ.
ಅಮಾವಾಸ್ಯೆಯ ವಿಶೇಷ ದಿನವಾದ ಇಂದು ಮುಂಜಾನೆಯಿಂದಲೇ ಶ್ರೀ ಮಹದೇಶ್ವರ ಸ್ವಾಮಿಗೆ ಸಾಂಪ್ರದಾಯಿಕವಾಗಿ ವಿಶೇಷ ಎಣ್ಣೆ ಮಜ್ಜನ (ಅಭಿಷೇಕ) ಹಾಗೂ ಅತ್ಯಂತ ಆಕರ್ಷಕ ಪುಷ್ಪಾಲಂಕಾರಗಳನ್ನು ನೆರವೇರಿಸಲಾಯಿತು. ಸಹಸ್ರಾರು ಭಕ್ತರು ಏಕಕಾಲದಲ್ಲಿ ಬೆಟ್ಟಕ್ಕೆ ಲಗ್ಗೆ ಇಟ್ಟಿರುವುದರಿಂದ ಮಲೆ ಮಹದೇಶ್ವರ ಬೆಟ್ಟದ ಕೆಎಸ್ಆರ್ಟಿಸಿ (KSRTC) ಬಸ್ ನಿಲ್ದಾಣವು ಸಂಪೂರ್ಣವಾಗಿ ಜನಸಾಗರದಿಂದ ತುಂಬಿ ತುಳುಕುತ್ತಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.