Headlines

Video: ಅಮೆರಿಕ-ಇರಾನ್ ಶಾಂತಿ ಒಪ್ಪಂದ: 108 ದಿನಗಳ ಯುದ್ಧಕ್ಕೆ ತೆರೆ, ಪ್ರಮುಖ ಷರತ್ತುಗಳೇನು? – Kannada News | US Iran Peace Deal: 14 Point Memorandum Ends Conflict, Trump Blasts Israel

ಟೆಹ್ರಾನ್, ಜೂನ್ 15: ಅಮೆರಿಕ ಮತ್ತು ಇರಾನ್ ನಡುವೆ ಸುಮಾರು 108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ ಬಿದ್ದಿದೆ. ಜೂನ್ 19 ರಂದು ಸ್ವಿಟ್ಜರ್ಲ್ಯಾಂಡ್‌ನ ಜಿನೇವಾದಲ್ಲಿ ಉಭಯ ರಾಷ್ಟ್ರಗಳ ನಡುವೆ ಬಹು ನಿರೀಕ್ಷಿತ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗುವುದು. ಅಮೆರಿಕದ ರಾಜತಾಂತ್ರಿಕ ಪ್ರಯತ್ನಗಳು ಯಶಸ್ವಿಯಾಗಿದ್ದು, ಎರಡೂ ಕಡೆಯಿಂದ ಸಮ್ಮತಿ ದೊರೆತಿರುವ ಹಿನ್ನೆಲೆಯಲ್ಲಿ ಈ ಒಪ್ಪಂದ ನಿರ್ಣಾಯಕ ಘಟ್ಟ ತಲುಪಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರು ಜಿನೇವಾದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ವೈಯಕ್ತಿಕವಾಗಿ ಭಾಗವಹಿಸಿ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಯಿದೆ.

ಈ ಐತಿಹಾಸಿಕ ಒಪ್ಪಂದವು ಒಟ್ಟು 14 ಪ್ರಮುಖ ಷರತ್ತುಗಳನ್ನು ಒಳಗೊಂಡಿದ್ದು, ಎರಡೂ ದೇಶಗಳ ಹಿತಾಸಕ್ತಿಗಳನ್ನು ಸಮತೋಲನಗೊಳಿಸಲು ಪ್ರಯತ್ನಿಸಲಾಗಿದೆ. ಅಮೆರಿಕದ ಪ್ರಮುಖ ಷರತ್ತುಗಳಲ್ಲಿ ಇರಾನ್ ತನ್ನ ಸಂವರ್ಧಿತ ಯುರೇನಿಯಂ ಅನ್ನು ಮುಂದಿನ ಎರಡು ತಿಂಗಳೊಳಗೆ ಸಂಪೂರ್ಣವಾಗಿ ನಾಶಪಡಿಸಬೇಕು ಎಂಬುದು ಪ್ರಮುಖವಾಗಿದೆ. ಪರಮಾಣು ವಸ್ತ್ರಗಳನ್ನು ಅಭಿವೃದ್ಧಿಪಡಿಸುವ ಇರಾನ್‌ನ ಸಾಮರ್ಥ್ಯವನ್ನು ತಡೆಯುವುದು ಅಮೆರಿಕದ ದೀರ್ಘಕಾಲದ ಉದ್ದೇಶವಾಗಿದೆ.

ಯುರೇನಿಯಂ ನಾಶಪಡಿಸಿದ ನಂತರವೇ ಇರಾನ್ ಮೇಲಿನ ಎಲ್ಲಾ ಆರ್ಥಿಕ ನಿರ್ಬಂಧಗಳನ್ನು ಅಮೆರಿಕ ತೆರವುಗೊಳಿಸಲಿದೆ ಎಂದು ತಿಳಿಸಲಾಗಿದೆ. ಅಲ್ಲದೆ, ಜಪ್ತಿ ಮಾಡಲಾದ ಇರಾನ್‌ನ ಸಂಪತ್ತನ್ನು ಕೂಡ ಬಿಡುಗಡೆ ಮಾಡುವುದಾಗಿ ಅಮೆರಿಕ ಭರವಸೆ ನೀಡಿದೆ. ಷರತ್ತುಗಳ ಬಗ್ಗೆ ಹೆಚ್ಚಿನ ಮಾಹಿತಿ ಈ ವಿಡಿಯೋದಲ್ಲಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

Leave a Reply

Your email address will not be published. Required fields are marked *