ಮೈಸೂರು, (ಜೂನ್ 15): ಮೈಸೂರಿನ (Mysuru) ದಟ್ಟಗಳ್ಳಿ 4ನೇ ಹಂತದ ಬಳಿಯಿರುವ ಪಬ್ ನಲ್ಲಿ (Pub) ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಈ ಬೆಂಕಿ ದುರಂತದಲ್ಲಿ ಇಬ್ಬರು ಸಜೀವ ದಹನವಾಗಿದ್ದರೆ, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪಬ್ನಲ್ಲಿ ಕೆಲಸ ಮಾಡುತ್ತಿದ್ದ ಶಾಹಿಲ್, ಪ್ರಕಾಶ್ ಮೃತ ದುರ್ವೈವಿಗಳು. ಇನ್ನು ಗಾಯಗೊಂಡಿರುವ ಏಳು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.