ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: twitter.com
ಕೆಲವರಿಗೆ ಒಗಟುಗಳನ್ನು ಬಿಡಿಸುವುದೆಂದರೆ ಅದೇನೋ ಕ್ರೇಜ್. ಹೀಗಾಗಿ ಬಿಡುವು ಸಿಕ್ಕಾಗಲ್ಲೆಲ್ಲಾ ಆಪ್ಟಿಕಲ್ ಇಲ್ಯೂಷನ್ (Optical Illusion) ಹಾಗೂ ಬ್ರೈನ್ ಟೀಸರ್ ನಂತಹ (brain teaser) ಒಗಟಿನ ಆಟಗಳನ್ನು ಬಿಡಿಸುತ್ತಾರೆ. ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಒಗಟುಗಳು ಸಹಕಾರಿಯಾಗಿದ್ದು, ಮೇಲ್ನೋಟಕ್ಕೆ ಸುಲಭವಾಗಿ ಕಂಡರೂ ಉತ್ತರ ಕಂಡುಕೊಳ್ಳೋದು ಅಷ್ಟೇ ಕಷ್ಟಕರ. ಇದೀಗ ಇಂತಹದ್ದೇ ಕಠಿಣ ಚಿತ್ರವೊಂದು ವೈರಲ್ ಆಗಿದ್ದು, ಈ ಚಿತ್ರದಲ್ಲಿರುವ ಸಂಖ್ಯೆಯನ್ನು ಹೇಳಬೇಕು. ಈ ಒಗಟು ಬಿಡಿಸಲು ಇರುವ ಸಮಯವಕಾಶ ಹತ್ತು ಸೆಕೆಂಡುಗಳು ಮಾತ್ರ. ನೀವು ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ.
ಈ ಚಿತ್ರದಲ್ಲಿರುವ ಸಂಖ್ಯೆಯೆಷ್ಟು?
ಕಪ್ಪು ಬಿಳುಪಿನ ಈ ಚಿತ್ರದಲ್ಲಿ ಸಂಖ್ಯೆಯೊಂದಿದೆ. ಈ ಸಂಖ್ಯೆಯನ್ನು 10 ಸೆಕೆಂಡುಗಳಲ್ಲಿ ಹುಡುಕಿ ಹೇಳುವುದೇ ನಿಮ್ಮ ಕೆಲಸ. ನೀವು ಈ ಸವಾಲಿಗೆ ರೆಡಿ ಇದ್ದರೆ, ನಿಮ್ಮ ಸಮಯ ಈಗ ಪ್ರಾರಂಭವಾಗುತ್ತದೆ. ನೀವು ಈ ಸವಾಲನ್ನು ಸ್ವೀಕರಿಸಲು ರೆಡಿ ಇದ್ದೀರಾ ಎಂದು ನಾವು ಭಾವಿಸುತ್ತೇವೆ.
ಇದನ್ನೂ ಓದಿ: ನಿಮ್ಮದು ಹದ್ದಿನ ಕಣ್ಣಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಕಳ್ಳ ಬೆಕ್ಕನ್ನು ಗುರುತಿಸಬಲ್ಲಿರಾ
ಈ ಚಿತ್ರದಲ್ಲಿರುವ ಸಂಖ್ಯೆ ನಿಮ್ಮ ಕಣ್ಣಿಗೆ ಬಿದ್ದಿತೇ?
ಎಷ್ಟೇ ಗಮನ ಹರಿಸಿದರೂ ಈ ಚಿತ್ರದಲ್ಲಿ ಅಡಗಿರುವ ಸಂಖ್ಯೆಯನ್ನು ಹುಡುಕಲು ಆಗಲಿಲ್ಲವೆಂದು ಚಿಂತಿಸುತ್ತಿದ್ದೀರಾ. ಹೆಚ್ಚು ಚಿಂತಿಸಬೇಡಿ. ಒಂದು ವೇಳೆ ಈ ಸಂಖ್ಯೆ ಗುರುತಿಸಲು ಸಾಧ್ಯವಾದರೆ ನಿಮ್ಮ ಕಣ್ಣುಗಳು ಚುರುಕಾಗಿ ಕೆಲಸ ಮಾಡುತ್ತಿವೆ ಎಂದರ್ಥ. ಈ ಕೆಳಗಿನ ಚಿತ್ರದಲ್ಲಿ ಉತ್ತರವನ್ನು ನಾವು ಕೆಂಪು ಬಣ್ಣದಲ್ಲಿ ಗುರುತಿಸಿದ್ದೇವೆ. ಈ ಚಿತ್ರದಲ್ಲಿರುವ ಸಂಖ್ಯೆ 3246.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 11:07 am, Tue, 16 June 26