Headlines

ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ; 16 ತಿಂಗಳ ಬಳಿಕ ಇಬ್ಬರ ಮುಖಾಮುಖಿ – Kannada News | No Warm Hugs; PM Modi and Donald Trump shake hands at G7 Summit in France First Meet After 16 Months

ಎವಿಯಾನ್, ಜೂನ್ 16: ಫ್ರಾನ್ಸ್‌ನ ಎವಿಯಾನ್ ನಗರದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi in France) ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಪರಸ್ಪರ ಭೇಟಿಯಾಗಿದ್ದಾರೆ. ಕಳೆದ 16 ತಿಂಗಳುಗಳಲ್ಲಿ ಉಭಯ ನಾಯಕರ ನಡುವೆ ನಡೆದ ಮೊದಲ ಮುಖಾಮುಖಿ ಇದಾಗಿದೆ. ಆಪ್ತ ಸ್ನೇಹಿತರೆಂದು ಹೇಳಿಕೊಳ್ಳುತ್ತಿದ್ದ ಈ ಇಬ್ಬರೂ ನಾಯಕರು ಇಂದು ಈ ಮೊದಲಿನಿಂತೆ ಬಿಗಿ ಅಪ್ಪುಗೆಯಿಲ್ಲದೆ ಕೇವಲ ಪರಸ್ಪರ ಮುಗುಳ್ನಕ್ಕು ಹಸ್ತಲಾಘವ ಮಾಡಿಕೊಂಡಿದ್ದಾರೆ. ಸಾಮಾನ್ಯವಾಗಿ ಪ್ರತಿ ಬಾರಿಯೂ ಪ್ರಧಾನಿ ಮೋದಿ ಟ್ರಂಪ್​ಗೆ ಆತ್ಮೀಯವಾದ ಅಪ್ಪುಗೆ ನೀಡುತ್ತಿದ್ದರು. ಆದರೆ, ಈ ಬಾರಿ ಎರಡೂ ದೇಶಗಳ ನಡುವಿನ ಮುಸುಕಿನ ಗುದ್ದಾಟದಿಂದಾಗಿ ಉಭಯ ನಾಯಕರು ಕೇವಲ ಔಪಚಾರಿಕವಾಗಿ ಉಭಯಕುಶಲೋಪರಿ ನಡೆಸಿದ್ದು ಮೇಲ್ನೋಟಕ್ಕೆ ಕಾಣಿಸುತ್ತಿತ್ತು.

ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆಯೋಜಿಸಿರುವ ಜಿ7 ಶೃಂಗಸಭೆಯ ಔಟ್‌ರೀಚ್ ಅಧಿವೇಶನದಲ್ಲಿ ಜಾಗತಿಕ ನಾಯಕರು ಒಟ್ಟುಗೂಡಿದಾಗ ಪ್ರಧಾನಿ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ನಡುವೆ ಈ ಸಂಕ್ಷಿಪ್ತ ಭೇಟಿ ನಡೆದಿದೆ. ಶೃಂಗಸಭೆಯ ವೇದಿಕೆಯಲ್ಲಿ ಇಬ್ಬರೂ ನಾಯಕರು ಪರಸ್ಪರ ಪಕ್ಕದ ಆಸನಗಳಲ್ಲೇ ಕುಳಿತುಕೊಂಡು ಕೆಲಕಾಲ ಸಂಭಾಷಣೆ ನಡೆಸಿದರು. ಬುಧವಾರ ಇವರಿಬ್ಬರ ನಡುವೆ ದ್ವಿಪಕ್ಷೀಯ ಮಾತುಕತೆ ನಿಗದಿಯಾಗಿದೆ. ಈ ಮಾತುಕತೆಯ ಬಗ್ಗೆ ಕುತೂಹಲ ಹೆಚ್ಚಾಗಿದೆ.

2025ರ ಫೆಬ್ರವರಿಯಲ್ಲಿ ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡ ತಕ್ಷಣ ಪ್ರಧಾನಿ ಮೋದಿ ಅವರು ವಾಷಿಂಗ್ಟನ್‌ಗೆ ಭೇಟಿ ನೀಡಿದ್ದರು. ಆ ಪ್ರವಾಸದ ಬಳಿಕ ಇಬ್ಬರು ನಾಯಕರು ಮುಖಾಮುಖಿಯಾಗಿ ಭೇಟಿಯಾಗುತ್ತಿರುವುದು ಇದೇ ಮೊದಲು.

(Video Source: BJP)

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *