ಚಾಮರಾಜನಗರ, ಜೂನ್ 17: ಗುಂಡ್ಲುಪೇಟೆ ತಾಲೂಕಿನ ಕಲಿಗೌಡನಹಳ್ಳಿಯಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯಲ್ಲಿ ಗ್ರೈಂಡರ್ನಿಂದ ವಿದ್ಯುತ್ ಪ್ರವಹಿಸಿ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಪುಟ್ಟಮ್ಮ ಹಾಗೂ ಆನಂದ್ ದಂಪತಿಯ ಪುತ್ರಿ ಅದ್ವಿತಾ ಮೃತಪಟ್ಟ ದುರ್ದೈವಿ. ಮನೆಯಲ್ಲಿ ಆಟವಾಡುತ್ತಿದ್ದ ಅದ್ವಿತಾ ನೀರು ಕುಡಿಯಲು ಅಡುಗೆ ಮನೆಗೆ ತೆರಳಿದ್ದಳು. ಆ ಸಮಯದಲ್ಲಿ ಅಡುಗೆ ಮನೆಯಲ್ಲಿ ಆನ್ ಆಗಿದ್ದ ಗ್ರೈಂಡರ್ ಅನ್ನು ಮುಟ್ಟಿದ್ದಾಳೆ. ಗ್ರೈಂಡರ್ ಅನ್ನು ಮುಟ್ಟಿದ ತಕ್ಷಣವೇ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅದ್ವಿತಾಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಈಗಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.