Headlines

Breaking News Today Live: ಅತಿಯಾದ ನಂಬಿಕೆಯೇ ಆಘಾತ ತಂದಿದೆ ಎಂದು ಹೆಚ್​.ಡಿ.ಕುಮಾರಸ್ವಾಮಿ

Breaking News Today Live: ಅತಿಯಾದ ನಂಬಿಕೆಯೇ ಆಘಾತ ತಂದಿದೆ ಎಂದು ಹೆಚ್​.ಡಿ.ಕುಮಾರಸ್ವಾಮಿ

ಬೆಂಗಳೂರು, ಜೂ.19: ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗಿದ್ದ, ವಿಧಾನ ಪರಿಷತ್​​ ಚುನಾವಣೆಗೆ ಕೊನೆಗೂ ತೆರೆಬಿದ್ದಿದೆ. ಆಡಳಿತ ಪಕ್ಷ ಕಾಂಗ್ರೆಸ್​​ಗೆ ಗೆಲುವಿನ ಸಂತಸ ತಂದರೆ, ವಿರೋಧ ಪಕ್ಷಗಳಿಗೆ ಸೋಲಿನ ರುಚಿ ತೋರಿಸಿದೆ. ಅದರಲ್ಲೂ ಕಾಂಗ್ರೆಸ್​​ ಹಾಗೂ ಜೆಡಿಎಸ್​ ನಡುವೆ ಇದ್ದ ಪೈಪೋಟಿಯಲ್ಲಿ ಜೆಡಿಎಸ್​​ ಸೋತಿದೆ. ಈ ಬಗ್ಗೆ ಕೇಂದ್ರ ಸಚಿವ ಹೆಚ್​​​​.ಡಿ ಕುಮಾರಸ್ವಾಮಿ ಆರೋಪಗಳನ್ನು ಮಾಡಿದ್ದಾರೆ. ಇನ್ನೊಂದು ಕಡೆ ಈ ಬಗ್ಗೆ ರಾಷ್ಟ್ರ ರಾಜಕಾರಣದಲ್ಲೂ ಭಾರೀ ಚರ್ಚೆಗಳು ನಡೆದಿದೆ. ಮೇಕೆದಾಟು ಜಲಾಶಯ ಯೋಜನೆಗೆ ಸಂಬಂಧಿಸಿ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ, ಉಭಯ ರಾಜ್ಯಗಳ ನಡುವೆ ರಾಜಕೀಯ ಸಂಘರ್ಷ ತಾರಕಕ್ಕೇರಿದೆ. ತಮಿಳುನಾಡಿನ ನೂತನ ಸಿಎಂ ಜೋಸೆಫ್ ವಿಜಯ್ ಸರ್ಕಾರವು ಯೋಜನೆಯನ್ನು ಬಲವಾಗಿ ವಿರೋಧಿಸುತ್ತಿದ್ದರೆ, ಇತ್ತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಿಳುನಾಡಿನ ಕ್ಯಾತೆಗೆ ತಕ್ಕ ತಿರುಗೇಟು ನೀಡಿದ್ದಾರೆ. ಜಾಗತಿಕ ಮಟ್ಟದಲ್ಲಿ ಯುದ್ಧ ಒಪ್ಪಂದ ಹಾಗೂ ಶಾಂತಿ ಸ್ಥಾಪನೆಗೆ ಭಾರೀ ಚರ್ಚೆಗಳು ನಡೆಯುತ್ತಿದೆ. ಈ ಹೊತ್ತಿನ  ಪ್ರಮುಖ ಸುದ್ದಿಗಳು ಇಲ್ಲಿದೆ ನೋಡಿ.

Source link

Leave a Reply

Your email address will not be published. Required fields are marked *