ರಾಜ್ಯ ಸೇರಿ ದೇಶಾದ್ಯಂತ ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಭಾರತ ಸರ್ಕಾರವು ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನು ಪಶ್ಚಿಮ ಬಂಗಾಳದ ಕೊಲ್ಕತ್ತಾದ ಐತಿಹಾಸಿಕ ರೆಡ್ ರೋಡ್‌ನಲ್ಲಿ ಆಯೋಜಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರಿನ ವಿಧಾನಸೌಧ ಮುಂಭಾಗದಲ್ಲಿಯೂ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಘೋಷವಾಕ್ಯದಡಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆದಿದೆ. ಮೊದಲ ಬಾರಿಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರ ಕಾರಾಗೃಹಗಳಲ್ಲಿ ಯೋಗ ದಿನಾಚರಣೆ ಆಚರಿಸಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.