Headlines

ಅಂತಾರಾಷ್ಟ್ರೀಯ ಯೋಗ ದಿನ :30 ಸಾವಿರ ಜನರೊಂದಿಗೆ ಪ್ರಧಾನಿ ಮೋದಿ ಯೋಗಾಭ್ಯಾಸ – Kannada News | Kolkatas Red Road: 30K Join PM Modi for Yoga Day 2026, Emphasising Holistic Health

ಕೋಲ್ಕತ್ತಾ, ಜೂನ್ 21: ಪ್ರಧಾನಿ ನರೇಂದ್ರ ಮೋದಿ ಇಂದು ಕೋಲ್ಕತ್ತಾದ ಐತಿಹಾಸಿಕ ರೆಡ್ ರೋಡ್‌ನಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ 30 ಸಾವಿರ ಜನರೊಂದಿಗೆ ಯೋಗಾಭ್ಯಾಸ ಮಾಡಿದರು. ಯೋಗ ಎಲ್ಲರನ್ನು ಒಂದುಗೂಡಿಸುವ ಶಕ್ತಿಯನ್ನು ಹೊಂದಿದೆ. ಹಿಮಾಲಯದಿಂದ ಹಿಂದೂ ಮಹಾಸಾಗರದವರೆಗೂ, ಪೂರ್ವದಿಂದ ಪಶ್ಚಿಮದವರೆಗೂ ಇಡೀ ದೇಶ ಯೋಗದ ಶಕ್ತಿಯಿಂದ ಚೈತನ್ಯಭರಿತವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಕೋಲ್ಕತ್ತಾದ ಜನತೆ ಸ್ವಚ್ಛತೆಗಾಗಿ ಕೈಗೊಂಡಿರುವ ಕ್ರಮಗಳನ್ನು ಪ್ರಧಾನಿ ಶ್ಲಾಘಿಸಿದರು.

ಪ್ರಧಾನಿ ಮೋದಿ ಅವರು ಬಂಗಾಳದ ಪವಿತ್ರ ಭೂಮಿಗೆ ಭಗವಾನ್ ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದರು, ಮಹರ್ಷಿ ಅರವಿಂದರು ಮತ್ತು ಲಹರಿ ಮಹಾಶಯರಂತಹ ಮಹಾನ್ ಯೋಗಿಗಳ ಕೊಡುಗೆಯನ್ನು ಸ್ಮರಿಸಿದರು. ಯೋಗ ಕೇವಲ ದೈಹಿಕ ಶ್ರಮವಲ್ಲ, ಅದು ಮಾನವ ಜೀವನದ ಸಮತೋಲನಕ್ಕೆ ದಾರಿ ತೋರಿಸುತ್ತದೆ. ಯೋಗವು ಯಾವುದೇ ವಯಸ್ಸಿನ ಮಿತಿಯಿಲ್ಲದೆ, ಉತ್ತಮ ಆರೋಗ್ಯ ಮತ್ತು ಮಾನಸಿಕ ಸ್ಥೈರ್ಯವನ್ನು ನೀಡುತ್ತದೆ ಎಂದು ತಿಳಿಸಿದರು. ಭಗವದ್ಗೀತೆಯ ಉಲ್ಲೇಖದೊಂದಿಗೆ, ಯೋಗವು ದುಃಖಗಳನ್ನು ನಾಶಮಾಡಿ ಸಂತುಲಿತ ಜೀವನವನ್ನು ಕಲಿಯಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ಹೇಳಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *