ಕೋಲ್ಕತಾ, ಜೂನ್ 21: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Samman Nidhi Scheme) 23ನೇ ಕಂತಿನ ಹಣವನ್ನು ಜೂನ್ 20, ಶನಿವಾರದಂದು ಬಿಡುಗಡೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಾರಕೇಶ್ವರ್ನಲ್ಲಿ ಹೊಸ ಕಂತು ರಿಲೀಸ್ ಮಾಡಿದ್ದಾರೆ. 9.44 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ತಲಾ 2,000 ರೂಗಳಂತೆ ಒಟ್ಟು 18,800 ಕೋಟಿ ರೂ ಹಣವನ್ನು ಡಿಬಿಟಿ ಮೂಲಕ ನೇರವಾಗಿ ವರ್ಗಾವಣೆ ಮಾಡಲಾಗಿದೆ. 2018ರ ಡಿಸೆಂಬರ್ನಲ್ಲಿ ಆರಂಭಗೊಂಡ ಈ ಯೋಜನೆಯಲ್ಲಿ ರೈತರಿಗೆ ಕೇಂದ್ರ ಸರ್ಕಾರ ಮಾಡಿರುವ ವೆಚ್ಚ 4.28 ಲಕ್ಷ ಕೋಟಿ ರೂಗಿಂತ ಹೆಚ್ಚಿದೆ.
ನಿಮಗೆ ಪಿಎಂ ಕಿಸಾನ್ 23ನೇ ಕಂತಿನ ಹಣ ಸಿಕ್ಕಿದೆಯಾ?
ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ನೊಂದಾಯಿಸಿದ್ದರೆ ಇಷ್ಟರಲ್ಲಿ ಹಣ ವರ್ಗಾವಣೆ ಆಗಿರುತ್ತದೆ, ಅಥವಾ ಸೋಮವಾರ ಕ್ರೆಡಿಟ್ ಆಗಬಹುದು. ಬ್ಯಾಂಕ್ ಅಕೌಂಟ್ ಅನ್ನು ಒಮ್ಮೆ ಪರಿಶೀಲಿಸಿ ನೋಡಿ. ಅಥವಾ ಪಿಎಂ ಕಿಸಾನ್ ಯೋಜನೆಯ ವೆಬ್ಸೈಟ್ಗೆ ಹೋದರೆ ಅಲ್ಲಿ ‘ನೋ ಯುವರ್ ಸ್ಟೇಟಸ್’ (Know Your Status) ಟ್ಯಾಬ್ ಕಾಣುತ್ತದೆ. ಅದರಿಂದಲೂ ಹಣ ಟ್ರಾನ್ಸ್ಫರ್ ಆಗಿದೆಯಾ ಇಲ್ಲವಾ ಎಂದು ತಿಳಿಯಬಹುದು.
ಇದನ್ನೂ ಓದಿ: ಅಕ್ಸೆಂಚರ್ ಕೊಟ್ಟ ಒಂದು ರಿಪೋರ್ಟ್ಗೆ ಭಾರತದ ಷೇರುಬಜಾರು ಅಲ್ಲೋಲಕಲ್ಲೋಲ; ಶುಕ್ರವಾರ 2 ಲಕ್ಷ ಕೋಟಿ ರೂ ನಷ್ಟ
ನೋ ಯುವರ್ ಸ್ಟೇಟಸ್ ಕ್ಲಿಕ್ ಮಾಡಿದಾಗ ನಿಮ್ಮ ನೊಂದಾಯಿತ ಸಂಖ್ಯೆ ಕೇಳುತ್ತದೆ. ಅದನ್ನು ನಮೂದಿಸಿದರೆ ಮಾಹಿತಿ ಸಿಗುತ್ತದೆ.
ಬೆನಿಫಿಶಿಯರಿ ಲಿಸ್ಟ್ ನೋಡಿ
ಪಿಎಂ ಕಿಸಾನ್ ವೆಬ್ಸೈಟ್ನಲ್ಲೇ ನೀವು ಫಲಾನುಭವಿಗಳ ಪಟ್ಟಿಯಲ್ಲಿದ್ದೀರೋ ಇಲ್ಲವೋ ಎಂಬುದನ್ನು ತಿಳಿಯಬಹುದು. ವೆಬ್ಸೈಟ್ನಲ್ಲಿರುವ ಬೆನಿಫಿಶಿಯರಿ ಲಿಸ್ಟ್ ಅನ್ನು ಕ್ಲಿಕ್ ಮಾಡಿ, ಆ ಬಳಿಕ ರಾಜ್ಯ, ಜಿಲ್ಲೆ, ತಾಲೂಕು, ಗ್ರಾಮವನ್ನು ಆಯ್ದುಕೊಂಡರೆ, ಆ ಗ್ರಾಮದಲ್ಲಿರುವ ಎಲ್ಲಾ ಫಲಾನುಭವಿಗಳ ಪಟ್ಟಿ ನೋಡಬಹುದು. ಅದರಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ.
ಪಿಎಂ ಕಿಸಾನ್ ಹಣ ಬಂದಿಲ್ಲವೆಂದರೆ ಇವಿರಬಹುದು ಕಾರಣಗಳು
ಪಿಎಂ ಕಿಸಾನ್ ಯೋಜನೆಯಲ್ಲಿ ನೀವು ನೊಂದಾಯಿಸಿಕೊಂಡಿದ್ದೂ, ಬೆನಿಫಿಶಿಯರಿ ಲಿಸ್ಟ್ನಲ್ಲಿ ಹೆಸರಿದ್ದೂ ಹಣ ಬಂದಿಲ್ಲದಿರುವ ಸಾಧ್ಯತೆ ಇರುತ್ತದೆ. ಇದಕ್ಕೆ ಕಾರಣಗಳು ಇಲ್ಲದಿಲ್ಲ.
- ನೀವು ಇಕೆವೈಸಿ ಅಪ್ಡೇಟ್ ಮಾಡಿಲ್ಲದಿದ್ದರೆ ಹಣ ಬರುವುದಿಲ್ಲ.
- ಬ್ಯಾಂಕ್ ಅಕೌಂಟ್ ನಂಬರ್, ಐಎಫ್ಎಸ್ಸಿ ಕೋಡ್ ತಪ್ಪಾಗಿ ನಮೂದಾಗಿದ್ದರೆ ಹಣ ಬರುವುದಿಲ್ಲ.
- ಬ್ಯಾಂಕ್ ಅಕೌಂಟ್ಗೆ ಆಧಾರ್ ಲಿಂಕ್ ಆಗಿಲ್ಲದಿದ್ದರೂ ಹಣ ಕ್ರೆಡಿಟ್ ಆಗುವುದಿಲ್ಲ.
ಇದನ್ನೂ ಓದಿ: ಇನ್ಸ್ಟಾ ಸ್ಕ್ರೋಲ್ ಮಾಡುವಾಗ ಬೇಡದ್ದು ಬರುತ್ತಿವೆಯಾ? ನೀವಿಚ್ಛಿಸುವವೇ ಫೀಡ್ನಲ್ಲಿ ಬರುವಂತೆ ಮಾಡುತ್ತದೆ ಈ ಹೊಸ ಮೆಟಾ ಫೀಚರ್
ಹೆಚ್ಚಿನ ಮಾಹಿತಿಗೆ ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಹೋಗಿ: pmkisan.gov.in/
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ