ಕೊಪ್ಪಳ, ಜೂನ್ 21: ಜಿಲ್ಲೆಯ ಪ್ರಸಿದ್ಧ ಹಾಗೂ ಐತಿಹಾಸಿಕ ಕ್ಷೇತ್ರವಾದ ಹುಲಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ ಕಾರ್ಯ ಇಂದು ಅಧಿಕಾರಿಗಳ ಸಮ್ಮುಖದಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕಳೆದ ಮೇ 30 ರಂದು ಕೊನೆಯ ಬಾರಿ ಹುಂಡಿ ಎಣಿಕೆ ನಡೆದಿತ್ತು. ಕೇವಲ 20 ದಿನಗಳ ಅವಧಿಯಲ್ಲಿ ಭಕ್ತರು ದೇವಾಲಯಕ್ಕೆ ಬರೋಬ್ಬರಿ 1,03,93,851 ರೂಪಾಯಿ ನಗದು ಹಣವನ್ನು ಕಾಣಿಕೆಯಾಗಿ ಸಮರ್ಪಿಸಿದ್ದಾರೆ.
ಹಣದ ಜೊತೆಗೆ ಭಕ್ತರು ತಮ್ಮ ಆರಾಧ್ಯ ದೇವಿಗೆ 78 ಗ್ರಾಂ ಚಿನ್ನ ಹಾಗೂ 3 ಕೆಜಿ 300 ಗ್ರಾಂ ಕಚ್ಚಾ ಬೆಳ್ಳಿಯನ್ನು ಹುಂಡಿಯಲ್ಲಿ ಹಾಕಿದ್ದಾರೆ. ಮುಜರಾಯಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಮ್ಮುಖದಲ್ಲಿ ನಡೆದ ಈ ಎಣಿಕೆ ಕಾರ್ಯದಲ್ಲಿ ನೂರಾರು ಭಕ್ತರು ಹಾಗೂ ಸ್ವಯಂಸೇವಕರು ಪಾಲ್ಗೊಂಡಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ