ಲಕ್ನೋ, ಜೂನ್ 22: ಉತ್ತರ ಪ್ರದೇಶದ ಲಕ್ನೋದ ಕೋಚಿಂಗ್ ಇನ್ಸ್ಟಿಟ್ಯೂಟ್ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ (Lucknow Fire Accident) 15 ಜನರು ಸಾವನ್ನಪ್ಪಿದ ನಂತರ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೆಜಿಎಂಯುಗೆ ಭೇಟಿ ನೀಡಿ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದರು. ಈ ದುರಂತಕ್ಕೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ಈ ಘಟನೆಯ ಸಂಪೂರ್ಣ ತನಿಖೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದರು.
ಲಕ್ನೋದ ಕೋಚಿಂಗ್ ಇನ್ಸ್ಟಿಟ್ಯೂಟ್ನಲ್ಲಿ ಸಂಭವಿಸಿದ ಬೆಂಕಿಯ ನಂತರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ (ಕೆಜಿಎಂಯು) ಭೇಟಿ ನೀಡಿ ಸಂತ್ರಸ್ತರ ಕುಟುಂಬಗಳು ಮತ್ತು ಗಾಯಾಳುಗಳನ್ನು ಭೇಟಿ ಮಾಡಿದರು. ಅವರೊಂದಿಗೆ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಕೂಡ ಇದ್ದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50,000 ರೂ. ಆರ್ಥಿಕ ನೆರವು ಘೋಷಿಸಿದರು.
ಅಲಿಗಂಜ್ ಬೆಂಕಿ ಅವಘಡದ ಸುದ್ದಿ ತಿಳಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪಶ್ಚಿಮ ಉತ್ತರ ಪ್ರದೇಶದ ಪ್ರವಾಸವನ್ನು ಮೊಟಕುಗೊಳಿಸಿ ರಾಜ್ಯ ರಾಜಧಾನಿಗೆ ಮರಳಿದರು. ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ಅಲಿಗಢದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿಗೆ ದುರಂತದ ಬಗ್ಗೆ ತಿಳಿಯಿತು. ಅಪಘಾತದ ಸ್ಥಳಕ್ಕೆ ಭೇಟಿ ನೀಡುವುದಾಗಿ ಹೇಳಿದ ಮುಖ್ಯಮಂತ್ರಿ, ಘಟನೆಯ ಬಗ್ಗೆ ಕೂಲಂಕಷ ತನಿಖೆ ನಡೆಸಿ, ಹೊಣೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ