Headlines

ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್! – Kannada News | Tree Branch Falls on Tata Electronics Bus in Kolar, Driver and Cleaner Escape Unhurt

ಕೋಲಾರ, ಜೂನ್ 24: ನಗರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದ ಬಳಿ ನಿಲ್ಲಿಸಲಾಗಿದ್ದ ಖಾಸಗಿ ಕಂಪನಿಯ ಬಸ್ ಮೇಲೆ ಬೃಹತ್ ಮರದ ಕೊಂಬೆಯೊಂದು ಮುರಿದು ಬಿದ್ದಿರುವ ಘಟನೆ ನಡೆದಿದೆ. ತೀವ್ರ ಗಾಳಿಯ ಹಿನ್ನೆಲೆಯಲ್ಲಿ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ. ಈ ಬಸ್ ಖ್ಯಾತ ‘ಟಾಟಾ ಎಲೆಕ್ಟ್ರಾನಿಕ್ಸ್’ ಕಂಪನಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಘಟನೆ ಸಂಭವಿಸಿದ ವೇಳೆ ಅದೃಷ್ಟವಶಾತ್ ಬಸ್‌ನಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಮತ್ತು ಸಾರ್ವಜನಿಕರು ಬಸ್ ಮೇಲಿದ್ದ ಕೊಂಬೆಯನ್ನು ತೆರವುಗೊಳಿಸಲು ಕ್ರಮ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *