ಪ್ರಾತಿನಿಧಿಕ ಚಿತ್ರImage Credit source: Getty images
ಮಂಡ್ಯ, ಜೂನ್ 24: ಕಾವೇರಿ ನದಿಯಲ್ಲಿ ನಾಲ್ವರು ನೀರುಪಾಲಾಗಿರುವಂತಹ (death) ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ನಡೆದಿದೆ. ಸಂಜೆ 5 ಗಂಟೆ ಸುಮಾರಿಗೆ ಆಂಜನೇಯ ದೇವಸ್ಥಾನಕ್ಕೆ ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ನೀರುಪಾಲಾಗಿರುವ ಬೆಂಗಳೂರು ಮೂಲದ ಒಂದೇ ಕುಟುಂಬದವರು ಎನ್ನಲಾಗುತ್ತಿದೆ. ಮೃತರ ಗುರುತು ಇದುವರೆಗೆ ಪತ್ತೆಯಾಗಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಹಲಗೂರು ಠಾಣೆ ಪೊಲೀಸರು ತೆರಳಿದ್ದಾರೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.