ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡುImage Credit source: Tv9 Kannada
ಕೊಪ್ಪಳ, ಜೂನ್ 25: ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್ಗಳ ಲೋಕಾರ್ಪಣೆ ಹಿನ್ನೆಲೆ ಕೊಪ್ಪಳ ತಾಲೂಕಿನ ಮುನಿರಾಬಾದ್ನಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ರೈತ ಬಾಂಧವರಿಗೆ ನಮಸ್ಕಾರ ಅಂತಾ ಕನ್ನಡದಲ್ಲೇ ಭಾಷಣ ಆರಂಭಿಸಿದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಕಾಂಗ್ರೆಸ್ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಮತ್ತು ರೇವಂತ್ ರೆಡ್ಡಿ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ್ದಾರೆ. ನದಿಗಳ ಜೋಡಣೆಯಿಂದ ನೀರಿನ ಸಮಸ್ಯೆಗೆ ಪರಿಹಾರ ದೊರೆಯಲಿದ್ದು ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಇದು ನಡೆಯುವ ವಿಶ್ವಾಸ ತನಗಿದೆ ಎಂದವರು ಹೇಳಿದ್ದಾರೆ.
ಚಂದ್ರಬಾಬು ನಾಯ್ಡು ಹೇಳಿದ್ದೇನು?
తుంగభద్ర ప్రాజెక్టు నూతన గేట్ల ప్రారంభోత్సవంలో పాల్గొన్న ముఖ్యమంత్రి శ్రీ నారా చంద్రబాబు నాయుడు గారు https://t.co/HxMjRzawIN
— Telugu Desam Party (@JaiTDP) June 25, 2026
ನನಗೆ ಕನ್ನಡ ಬಂದಿದ್ರೆ ಇನ್ನೂ ಚೆನ್ನಾಗಿ ಮಾತನಾಡುತ್ತಿದ್ದೆ ಎಂದ ನಾಯ್ಡು, ತುಂಗಭದ್ರಾ ತಾಯಿಗೆ ಶಿರಭಾಗಿ ನಮಸ್ಕಾರ ಮಾಡ್ತೀನಿ. ತುಂಗಾ ಪಾನಃ ಗಂಗಾ ಸ್ನಾನಃ ಎಂಬ ಮಾತಿದೆ. ತುಂಗಾ ನೀರು ಕುಡಿಯಲು ಶುದ್ಧ ಎಂದೇ ಪ್ರಸಿದ್ದಿ ಪಡೆದಿದೆ. ಕೊಚ್ಚಿ ಹೋಗಿದ್ದರಿಂದ ನೂತನ ಕ್ರಸ್ಟ್ ಗೇಟ್ ಲೋಕಾರ್ಪಣೆ ಆಗಿದೆ. ಕೊಚ್ಚಿ ಹೋಗಿದ್ದ ಒಂದು ಗೇಟ್ನ್ನು ಮಾತ್ರ ಹೊಸದಾಗಿ ಅಳವಡಿಸಿಲ್ಲ. ಬದಲಾಗಿ ಜಲಾಶಯದ ಎಲ್ಲಾ 33 ಗೇಟ್ ಹೊಸದಾಗಿ ಅಳವಡಿಸಲಾಗಿದೆ. ಕೇವಲ ಆರು ತಿಂಗಳಲ್ಲಿ ಈ ಕೆಲಸ ಮುಗಿದಿದ್ದಕ್ಕೆ ಹೆಮ್ಮೆ ಇದೆ. ಮೂವರು ಸಿಎಂಗಳು ಒಂದೇ ವೇದಿಕೆಯಲ್ಲಿ ಸೇರಿದ್ದು ಒಂದು ಇತಿಹಾಸ. ಹೊಸ ಕ್ರಸ್ಟ್ ಗೇಟ್ ಅಳವಡಿಕೆ ವಿಳಂಬವಾಗಿದ್ದರೆ ಭಾರಿ ಅಪಾಯ ಆಗುತ್ತಿತ್ತು. ಇದೀಗ ಆ ಅಪಾಯ ದೂರವಾಗಿದೆ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶ ಬಹಳ ವೇಗವಾಗಿ ಮುನ್ನಡೆಯುತ್ತಿದೆ. ಸರಿಯಾದ ವ್ಯಕ್ತಿ, ಸರಿಯಾದ ಸ್ಥಳ ಮತ್ತು ಸರಿಯಾದ ಸಮಯ ಇದ್ದರೆ ಎಲ್ಲ ಸಾಧ್ಯವೆಂದು ಪ್ರತಿದಾರಿ ಬಾರಿ ನಾನು ಹೇಳುತ್ತೇನೆ. ಅದು ನರೇಂದ್ರ ಮೋದಿ ಎಂದವರು ಹೇಳಿದ್ದಾರೆ.
ಇದನ್ನೂ ಓದಿ: ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ತುಂಗಭದ್ರಾ ಜಲಾಶಯದ ಹೊಸ ಗೇಟ್ಗಳ ಉದ್ಘಾಟನೆ
12 ಜನರಿಗೆ ಸನ್ಮಾನ
ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್ಗಳನ್ನು ಯಶಸ್ವಿಯಾಗಿ ಅಳವಡಿಕೆ ಮಾಡಿದ ಕನ್ನಯ್ಯ ನಾಯ್ಡು ಸೇರಿದಂತೆ 12 ಜನರಿಗೆ ಕಾರ್ಯಕ್ರಮದ ವೇದಿಕೆಯಲ್ಲಿ ಸನ್ಮಾನ ನೆರವೇರಿಸಲಾಗಿದೆ. ಮೂರು ರಾಜ್ಯಗಳ ಸಿಎಂ ಹಾಗೂ ಕೇಂದ್ರ ಜಲಶಕ್ತಿ ಸಚಿವರು ಗೌರವ ಸಮರ್ಪಣೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಮೂರು ರಾಜ್ಯಗಳ ಸಿಎಂಗಳು ಭಾಗಿಯಾಗಿದ್ದು ವಿಶೇಷವಾಗಿತ್ತು. ಜೊತೆಗೆ ಕೇಂದ್ರ ಜಲಶಕ್ತಿ ಸಚಿವ ಸಿ. ಆರ್. ಪಾಟೀಲ್ ಸೇರಿ ಆಂಧ್ರ ಮತ್ತು ತೆಲಂಗಾಣ ಎರಡೂ ರಾಜ್ಯಗಳ ಜಲಸಂಪನ್ಮೂಲ ಸಚಿವರು ಕೂಡ ಈ ವೇಳೆ ಉಪಸ್ಥಿತರಿದ್ದರು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.