ಭಾರತ ಟಿ20 ತಂಡ ಪ್ರಸ್ತುತ ಐರ್ಲೆಂಡ್ (India vs Ireland) ಪ್ರವಾಸದಲ್ಲಿದೆ. ಈ ಎರಡೂ ತಂಡಗಳ ನಡುವಿನ ಟಿ20 ಸರಣಿ ಜೂನ್ 26 ರಿಂದ ಪ್ರಾರಂಭವಾಗಲಿದೆ. ನಾಯಕನಾಗಿ ಮೊದಲ ಸರಣಿಯಲ್ಲಿ ತಂಡವನ್ನು ಮುನ್ನಡೆಸುತ್ತಿರುವ ಶ್ರೇಯಸ್ ಅಯ್ಯರ್ ಸರಣಿ ಗೆಲುವಿನ ಇರಾದೆಯಲ್ಲಿದ್ದಾರೆ. ಇನ್ನು ಉಭಯ ತಂಡಗಳ ಮುಖಾಮುಖಿ ನೋಡಿದರೆ ಐರ್ಲೆಂಡ್, ಭಾರತದ ವಿರುದ್ಧ ಒಂದೇ ಒಂದು ಅಂತರರಾಷ್ಟ್ರೀಯ ಪಂದ್ಯವನ್ನು ಗೆದ್ದಿಲ್ಲ. ಭಾರತ ಮತ್ತು ಐರ್ಲೆಂಡ್ 2009 ರಿಂದ ಟಿ20 ಪಂದ್ಯಗಳನ್ನು ಆಡುತ್ತಿದ್ದು, ಎರಡೂ ತಂಡಗಳ ನಡುವೆ ಒಟ್ಟು ಎಂಟು ಪಂದ್ಯಗಳನ್ನು ಆಡಲಾಗಿದೆ. ಈ ಎಂಟು ಪಂದ್ಯಗಳನ್ನು ಭಾರತ ಗೆದ್ದುಕೊಂಡಿದೆ. ಆಶ್ಚರ್ಯಕರವೆಂದರೆ, ಆ ಎಂಟು ಪಂದ್ಯಗಳಲ್ಲಿ ಆರು ಪಂದ್ಯಗಳನ್ನು ಐರಿಶ್ ನೆಲದಲ್ಲಿ ಆಡಲಾಗಿದೆ. ಇನ್ನು ಉಭಯ ತಂಡಗಳ ಮೊದಲ ಟಿ20 ಪಂದ್ಯದ ಬಗ್ಗೆಗಿನ ಉಳಿದ ಮಾಹಿತಿ ಇಲ್ಲಿದೆ.
ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಯಾವಾಗ ನಡೆಯಲಿದೆ?
ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಜೂನ್ 26 ರಂದು ನಡೆಯಲಿದೆ.
ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಬೆಲ್ಫಾಸ್ಟ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.
ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಭಾರತೀಯ ಕಾಲಮಾನ ಸಂಜೆ 6 ಗಂಟೆಗೆ ಪ್ರಾರಂಭವಾಗುತ್ತದೆ.
ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ವೀಕ್ಷಿಸಬಹುದು.
IND vs IRE: ಭಾರತ-ಐರ್ಲೆಂಡ್ ನಡುವಿನ ಟಿ20 ಸರಣಿಯ ಸಮಯ ಬದಲಾವಣೆ
ಉಭಯ ತಂಡಗಳು
ಐರ್ಲೆಂಡ್ ತಂಡ: ಲೋರ್ಕನ್ ಟಕರ್ (ನಾಯಕ), ರಾಸ್ ಅಡೈರ್, ಬೆನ್ ಕೌಲ್ಟಿಡ್ಜ್, ಗ್ಯಾರೆತ್ ಡೆಲಾನಿ, ಜಾರ್ಜ್ ಡಾಕ್ರೆಲ್, ಸ್ಟೀಫನ್ ಡೊಹೆನಿ, ಮ್ಯಾಥ್ಯೂ ಹಂಫ್ರೈಸ್, ಗ್ಯಾವಿನ್ ಹೋಯ್, ಮ್ಯಾಥ್ಯೂ ಹೊಲ್ಲಾರ್ಡ್, ಲಿಯಾಮ್ ಮೆಕಾರ್ಥಿ, ಜೇ ಮುಂದ್ರಾ, ಹ್ಯಾರಿ ಟೆಕ್ಟರ್, ಟಿಮ್ ಟೆಕ್ಟರ್, ರೂಬೆನ್ ವಿಲ್ಸನ್.
ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ತಿಲಕ್ ವರ್ಮಾ (ಉಪನಾಯಕ), ನಿತೀಶ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್ ಮತ್ತು ವೈಭವ್ ಸೂರ್ಯವಂಶಿ.