Headlines

ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್ ಸಮನ್ಸ್ – Kannada News | Bengaluru Court Summons Priyank Kharge, Mohammed Nalapad in RSS Defamation Case

ಬೆಂಗಳೂರು, ಜೂನ್​​ 27: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಸದಸ್ಯರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್​ಗೆ ಬೆಂಗಳೂರಿನ ನ್ಯಾಯಾಲಯ ತುರ್ತು ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಇಬ್ಬರು ನಾಯಕರ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ವಿಚಾರಣೆಗೆ ಅಂಗೀಕರಿಸಿದ್ದು, ಜುಲೈ 21ರಂದು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದೆ. 2025ರ ಅಕ್ಟೋಬರ್ 14ರಂದು ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಸದಸ್ಯರ ವಿರುದ್ಧ ಟ್ವೀಟ್ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಇದೇ ರೀತಿ, ಮೊಹಮ್ಮದ್ ನಲಪಾಡ್​ ಕೂಡ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಆರ್‌ಎಸ್‌ಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಹೀಗಾಗಿ ಆರ್‌ಎಸ್‌ಎಸ್ ಕಾರ್ಯಕರ್ತ ಎ. ತೇಜಸ್​​ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಇದೀಗ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *