ಬೆಂಗಳೂರು, (ಜೂನ್ 27): ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆಯನ್ನು (ಆರ್‌ಎಸ್ಎಸ್) ನೋಂದಣಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪ ಜೋರಾಗಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎತ್ತಿದ ಆರ್‌ಎಸ್ಎಸ್ ನೋಂದಣಿ ವಿಚಾರಕ್ಕೆ ಬಿಜೆಪಿ ನಾಯಕರು ಸಹ ತಿರುಗೇಟು ನೀಡುತ್ತಿದ್ದಾರೆ. ಇನ್ನು ಆರೆಸ್ಸೆಸ್ ಅನ್ನು ಕಾನೂನು ಪ್ರಕಾರ ನೋಂದಣಿ ಮಾಡಬೇಕು ಎಂಬ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಆಗ್ರಹದ ಬಗ್ಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ (Pejawar Shree) ಪ್ರವೇಶಿಸಿ, ನೋಂದಣಿ ಮಾಡಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ ಎಂದಿದ್ದಾರೆ. ಇದರ ಬೆನ್ನಲ್ಲೇ ಕೆಪಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಪೇಜಾವರಶ್ರೀಗಳ ಹೇಳಿಕೆ ಪ್ರಸ್ತಾಪಿಸಿ, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.