Headlines

ರಾಜ್ಯದ ಹಲವೆಡೆ ಸಾಧಾರಣ ಮಳೆ; ಉಡುಪಿ, ದಕ್ಷಿಣ ಕನ್ನಡಕ್ಕೆ ಯೆಲ್ಲೋ ಅಲರ್ಟ್​! – Kannada News | Karnataka Weather Forecast: Yellow Alert Issued for Coastal Districts; Rain Likely Across State

ಬೆಂಗಳೂರು, ಜೂನ್ 27: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕರಾವಳಿಯಲ್ಲಿ ವರುಣಾರ್ಭಟ

ಕರಾವಳಿ ತೀರದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಭಾಗದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸಲಿದ್ದು, ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಕರ್ನಾಟಕದಲ್ಲೂ ಗುಡುಗು ಸಹಿತ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿಯ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಸ್ಥಿತಿ ಏನು?

ದಕ್ಷಿಣ ಒಳನಾಡಿನ ಮಲೆನಾಡು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಮತ್ತೊಂದೆಡೆ, ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರವಾದ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ತೀರದ ಸಾರ್ವಜನಿಕರು ಮತ್ತು ಮೀನುಗಾರರು ಬಿರುಗಾಳಿ ಹಾಗೂ ಭಾರಿ ಮಳೆಯ ಹಿನ್ನೆಲೆಯಲ್ಲಿ ಜಾಗರೂಕರಾಗಿರಲು ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *