ನಟ, ನಿರ್ದೇಶಕ, ನಿರ್ಮಾಪಕ ರಿಷಬ್ ಶೆಟ್ಟಿ (Rishab Shetty) ಕರಾವಳಿ, ಮಲೆನಾಡಿನ ಸಂಸ್ಕೃತಿ, ಸಂಪ್ರದಾಯಗಳನ್ನು ಹಚ್ಚಿಕೊಂಡು, ನೆಚ್ಚಿಕೊಂಡು ಬಾಳುತ್ತಿದ್ದಾರೆ. ಅವರ ಸಿನಿಮಾಗಳಲ್ಲಿ ಮಾತ್ರವಲ್ಲದೆ, ಅವರ ಜೀವನದಲ್ಲಿಯೂ ಕರಾವಳಿಯ ಆಚರಣೆ, ಸಂಪ್ರದಾಯಗಳು ಹಾಸು-ಹೊಕ್ಕಾಗಿವೆ. ಇತ್ತೀಚೆಗೆ ನಟ ರಿಷಬ್ ಶೆಟ್ಟಿ ಅವರು ತಮ್ಮ ಕುಟುಂಬದೊಂದಿಗೆ ಯಕ್ಷಗಾನ ಮತ್ತು ರಾಮನ ಭಜನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ರಿಷಬ್ ಶೆಟ್ಟಿ ಮೊದಲ ಬಾರಿಗೆ ತಮ್ಮ ಪುತ್ರ ರನ್ವಿತ್ಗೆ ಬಣ್ಣ ಹಚ್ಚಿಸಿದ್ದಾರೆ. ಯಕ್ಷಗಾನ ಪ್ರಸಂಗದಲ್ಲಿ ರಿನ್ವಿತ್ ಪಾತ್ರವೊಂದನ್ನು ಮಾಡಿದ್ದಾರೆ. ವಿಡಿಯೋ ಅನ್ನು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ