VHT 2025-26: ಕೇವಲ 9 ರನ್​​ಗಳಿಂದ ದಾಖಲೆಯ 5ನೇ ಶತಕದಿಂದ ವಂಚಿತರಾದ ದೇವದತ್ ಪಡಿಕ್ಕಲ್ – Kannada News | Vijay Hazare Trophy Devdutt Padikkal Misses 5th Ton

ವಿಜಯ್ ಹಜಾರೆ ಟೂರ್ನಿಯ (Vijay Hazare Trophy) 6ನೇ ಸುತ್ತಿನ ಪಂದ್ಯಗಳು ಇಂದು ನಡೆಯುತ್ತಿವೆ. ಇಂದಿನ ಪಂದ್ಯದಲ್ಲಿ ಕರ್ನಾಟಕ ತಂಡಕ್ಕೆ ರಾಜಸ್ಥಾನ ತಂಡ ( Karnataka vs Rajasthan) ಎದುರಾಗಿದೆ. ಗುಜರಾತ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ತಂಡ ನಿಗದಿತ 50 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 324 ರನ್ ಕಲೆಹಾಕಿದೆ. ತಂಡದ ಪರ ನಾಯಕ ಮಯಾಂಕ್ ಅಗರ್ವಾಲ್ ಭರ್ಜರಿ ಶತಕ ಸಿಡಿಸಿದರೆ, ಅತ್ಯುತ್ತಮ ಫಾರ್ಮ್​ನಲ್ಲಿರುವ ದೇವದತ್ ಪಡಿಕ್ಕಲ್ ( Devdutt Padikkal) ಕೇವಲ 9 ರನ್​ಗಳಿಂದ ದಾಖಲೆಯ 5ನೇ ಶತಕದಿಂದ ವಂಚಿತರಾದರು. ಆದಾಗ್ಯೂ ನಾಯಕನ ಜೊತೆಗೂಡಿ ತಂಡಕ್ಕೆ ಒಳ್ಳೇಯ ಆರಂಭ ಒದಗಿಸಿಕೊಡುವಲ್ಲಿ ಪಡಿಕ್ಕಲ್ ಯಶಸ್ವಿಯಾದರು. ಇವರಿಬ್ಬರ ಜೊತೆಯಾಟದಿಂದಾಗಿ ಕರ್ನಾಟಕ ತಂಡ ಮೊದಲ ವಿಕೆಟ್​ಗೆ 184 ರನ್ ಕಲೆಹಾಕಿತು.

ಕರ್ನಾಟಕಕ್ಕೆ ಭರ್ಜರಿ ಆರಂಭ

ಈ ಪಂದ್ಯದಲ್ಲಿ ಟಾಸ್ ಸೋತ ಕರ್ನಾಟಕ ಮೊದಲು ಬ್ಯಾಟಿಂಗ್‌ ಮಾಡಬೇಕಾಯಿತು. ಎಂದಿನಂತೆ ನಾಯಕ ಮಯಾಂಕ್ ಹಾಗೂ ಪಡಿಕ್ಕಲ್ ಇನ್ನಿಂಗ್ಸ್ ಆರಂಭಿಸಿದರು. ಕಳೆದ ಪಂದ್ಯದಲ್ಲಿ ನಾಯಕ ಮಯಾಂಕ್ ಎಡವಿದ್ದರಿಂದ ಈ ಪಂದ್ಯದಲ್ಲಿ ಅವರ ಮೇಲೆ ನಿರೀಕ್ಷೆಗಳಿದ್ದವು. ಅದರಂತೆ ಬ್ಯಾಟ್ ಬೀಸಿದ ಮಯಾಂಕ್, ಪಡಿಕ್ಕಲ್ ಜೊತೆಗೆ ಉತ್ತಮ ಇನ್ನಿಂಗ್ಸ್ ಕಟ್ಟಿದರು. ಆರಂಭದಿಂದಲೂ ರಾಜಸ್ಥಾನ್ ವೇಗಿಗಳನ್ನು ಕಾಡಿದ ಈ ಜೋಡಿ ತಲಾ ಅರ್ಧಶತಕ ಬಾರಿಸುವುದರೊಂದಿಗೆ ತಂಡವನ್ನು ಶತಕದ ಗಡಿ ದಾಟಿಸಿತು. ಆ ಬಳಿಕ ನಾಯಕ ಮಯಾಂಕ್ ಈ ಆವೃತ್ತಿಯ ಎರಡನೇ ಶತಕದ ಸನಿಹದಲಿದ್ದರು. ಇತ್ತ ಪಡಿಕ್ಕಲ್ ಕೂಡ ಶತಕದತ್ತ ದಾಪುಗಾಲಿಟ್ಟಿದ್ದರು.

9 ರನ್​ಗಳಿಂದ 5ನೇ ಶತಕ ಮಿಸ್

ಆದರೆ 82 ಎಸೆತಗಳಲ್ಲಿ 12 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 91 ರನ್​ಗಳಿಸಿ ಆಡುತ್ತಿದ್ದ ಪಡಿಕ್ಕಲ್, ಎದುರಾಳಿ ತಂಡದ ನಾಯಕ ಮಾನವ್ ಸುತಾರ್ ಎಸೆದ 29ನೇ ಓವರ್​ನ 2ನೇ ಎಸೆತದಲ್ಲಿ ಬೌಲ್ಡ್ ಆಗುವ ಮೂಲಕ ವಿಕೆಟ್ ಒಪ್ಪಿಸಿದರು. ಈ ಮೂಲಕ ಪಡಿಕ್ಕಲ್, ಈ ಆವೃತ್ತಿಯ 5ನೇ ಶತಕದಿಂದ ವಂಚಿತರಾದರು. ಈ ಪಂದ್ಯದಲ್ಲಿ ಪಡಿಕ್ಕಲ್ ಶತಕ ಬಾರಿಸಿದ್ದರೆ, ವಿಜಯ್ ಹಜಾರೆ ಟೂರ್ನಿಯ ಒಂದೇ ಆವೃತ್ತಿಯಲ್ಲಿ ಅಧಿಕ ಶತಕಗಳನ್ನು ಬಾರಿಸಿದ್ದ ಆಟಗಾರರ ಪಟ್ಟಿಯಲ್ಲಿ ಜಂಟಿಯಾಗಿ ಅಗ್ರಸ್ಥಾನಕ್ಕೇರುತ್ತಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಪಡಿಕ್ಕಲ್​ಗೂ ಮುನ್ನ ಎನ್​ ಜಗದೀಸನ್ ಹಾಗೂ ಕನ್ನಡಿಗ ಕರುಣ್ ನಾಯರ್, ಒಂದೇ ಆವೃತ್ತಿಯಲ್ಲಿ ತಲಾ 5 ಶತಕ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ.

ದೇಶಿ ಟೂರ್ನಿಯಲ್ಲಿ ದೇವದತ್ ಪಡಿಕ್ಕಲ್ ಅಬ್ಬರ; ಭಾರತ ತಂಡಕ್ಕೆ ಆಯ್ಕೆ ಯಾವಾಗ?

6 ಪಂದ್ಯಗಳಲ್ಲಿ 4 ಶತಕ, 1 ಅರ್ಧಶತಕ

ಈ ಆವೃತ್ತಿಯಲ್ಲಿ ಇದುವರೆಗೆ 6 ಪಂದ್ಯಗಳನ್ನಾಡಿರುವ ಪಡಿಕ್ಕಲ್ 605 ರನ್ ಕಲೆಹಾಕಿದ್ದಾರೆ. ಇದರಲ್ಲಿ 4 ಭರ್ಜರಿ ಶತಕಗಳು ಹಾಗೂ ಒಂದು ಅರ್ಧಶತಕ ಸೇರಿದೆ. ಅಂದರೆ ಪಡಿಕ್ಕಲ್ ಆಡಿರುವ 6 ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಹೊರತುಪಡಿಸಿ ಉಳಿದ 5 ಪಂದ್ಯಗಳಲ್ಲಿ ಶತಕ ಹಾಗೂ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ. 2025-26ರ ವಿಜಯ್ ಹಜಾರೆ ಟ್ರೋಫಿಯ ಮೊದಲ ಪಂದ್ಯದಲ್ಲಿ ಪಡಿಕ್ಕಲ್ ಜಾರ್ಖಂಡ್ ವಿರುದ್ಧ 147 ರನ್ ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದರು. ನಂತರ ಕೇರಳ ವಿರುದ್ಧ 124 ರನ್, ತಮಿಳುನಾಡು ವಿರುದ್ಧ 22 ರನ್ ಗಳಿಸಿ ಔಟಾಗಿದ್ದರು. ನಂತರ ಪುದುಚೇರಿ ವಿರುದ್ಧ 113 ರನ್ ಬಾರಿಸಿದರೆ, ತ್ರಿಪುರ ವಿರುದ್ಧ 108 ರನ್ ಚಚ್ಚಿದ್ದರು. ಈಗ ರಾಜಸ್ಥಾನ ವಿರುದ್ಧ 91 ರನ್ ಬಾರಿಸಿದ ಪಡಿಕ್ಕಲ್ ಒಂಬತ್ತು ರನ್​ಗಳಿಂದ ಶತಕ ವಂಚಿತರಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:31 pm, Tue, 6 January 26

Source link

Leave a Reply

Your email address will not be published. Required fields are marked *