Headlines

IND vs ENG: 2ನೇ ಟಿ20 ಪಂದ್ಯಕ್ಕೆ ಪ್ಲೇಯಿಂಗ್ 11 ಪ್ರಕಟಿಸಿದ ಇಂಗ್ಲೆಂಡ್‌; ತಂಡದಲ್ಲಿ 2 ಬದಲಾವಣೆ – Kannada News | IND vs ENG 2nd T20: Jofra Archer and Josh Tongue Named in England’s Playing XI

ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ನಾಳೆ ಅಂದರೆ, ಜುಲೈ 4 ರಂದು ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಎರಡೂ ತಂಡಗಳು ಸರ್ವ ತಯಾರಿ ಮಾಡಿಕೊಂಡಿವೆ. ಏಕೆಂದರೆ ಮೊದಲ ಪಂದ್ಯ ಮಳೆಯಿಂದ ರದ್ದಾದ ಕಾರಣದಿಂದಾಗಿ ಎರಡೂ ತಂಡಗಳಿಗೆ ಗೆಲವಿನ ಖಾತೆ ತೆರೆಯಲು ಈ ಪಂದ್ಯ ಬಹಳ ಮುಖ್ಯವಾಗಿದೆ. ಇನ್ನು ಎಂದಿನಂತೆ ಪಂದ್ಯಕ್ಕೆ ಒಂದು ದಿನ ಮುಂಚಿತವಾಗಿಯೇ ಇಂಗ್ಲೆಂಡ್‌ ತಂಡ ತನ್ನ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದೆ. ಅಂದರೆ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿರುವ ಎರಡನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್‌ ಪರ ಯಾವೆಲ್ಲ 11 ಆಟಗಾರರು ಕಣಕ್ಕಿಳಿಯಲಿದ್ದಾರೆ ಎಂಬುದು ಖಚಿತವಾಗಿದೆ.

ತಂಡದಲ್ಲಿ 2 ಬದಲಾವಣೆ

ಈ ಮೊದಲೇ ನಿರೀಕ್ಷಿಸಿದಂತೆ ಎರಡನೇ ಟಿ20 ಪಂದ್ಯಕ್ಕೆ ಆತಿಥೇಯ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಎರಡು ಬದಲಾವಣೆಗಳಾಗಿವೆ. ಅದರಂತೆ ಅನುಭವಿ ವೇಗದ ಬೌಲರ್ ಜೋಫ್ರಾ ಆರ್ಚರ್ ತಂಡಕ್ಕೆ ಮರಳಿದ್ದು, ಇವರ ಜೊತೆಗೆ ಜೋಶ್ ಟಂಗ್ ಅವರಿಗೂ ಪ್ಲೇಯಿಂಗ್ 11ನಲ್ಲಿ ಅವಕಾಶ ನೀಡಲಾಗಿದೆ. ಆದರೆ ಮೊದಲ ಟಿ20 ಪಂದ್ಯದಲ್ಲಿ 33 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದಿದ್ದ ಸಾಕಿಬ್ ಮಹಮೂದ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಇನ್ನು ಈ ಪಂದ್ಯಕ್ಕೆ ಆಯ್ಕೆಯಾಗಿರುವ ಜೋಶ್ ಟಂಗ್ ಅವರಿಗೆ ಇದು ಮೊದಲ ಟಿ20 ಅಂತರರಾಷ್ಟ್ರೀಯ ಪಂದ್ಯವಾಗಿರಲಿದೆ.

ವಾಸ್ತವವಾಗಿ ಜೋಫ್ರಾ ಆರ್ಚರ್ ಮತ್ತು ಜೋಶ್ ಟಂಗ್ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಂಡದ ಭಾಗವಾಗಿದ್ದರು. ಆದ್ದರಿಂದ ಇವರಿಬ್ಬರಿಗೆ ಮೊದಲ ಟಿ20 ಪಂದ್ಯದಿಂದ ವಿಶ್ರಾಂತಿ ನೀಡಲಾಗಿತ್ತು. ಇದೀಗ ಇಬ್ಬರೂ ಆಡುವ XI ನಲ್ಲಿ ಸ್ಥಾನ ಪಡೆದಿದ್ದಾರೆ. ಇದನ್ನು ಹೊರತುಪಡಿಸಿ, ಇಂಗ್ಲೆಂಡ್ ತಂಡದಲ್ಲಿ ಬೇರೆ ಯಾವುದೇ ಬದಲಾವಣೆಗಳಿಲ್ಲ. ವಿಲ್ ಜ್ಯಾಕ್ಸ್ ಸೇರಿದಂತೆ ಮೂವರು ಸ್ಪಿನ್ನರ್‌ಗಳು ಈ ಪಂದ್ಯದಲ್ಲಿ ಆಡಲಿದ್ದಾರೆ.

IND vs ENG: ರಾತ್ರಿ 10 ಗಂಟೆಗೆ ಅಲ್ಲ; ಇನ್ನೂ ಬೇಗನೇ ಆರಂಭವಾಗಲಿದೆ 2ನೇ ಟಿ20 ಪಂದ್ಯ

ಎರಡನೇ ಟಿ20 ಪಂದ್ಯಕ್ಕೆ ಇಂಗ್ಲೆಂಡ್ ಪ್ಲೇಯಿಂಗ್ 11: ಫಿಲ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್ (ನಾಯಕ), ವಿಲ್ ಜ್ಯಾಕ್ಸ್, ಜಾಕೋಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ಆದಿಲ್ ರಶೀದ್, ಜೋಫ್ರಾ ಆರ್ಚರ್, ಲಿಯಾಮ್ ಡಾಸನ್, ಜೋಶ್ ಟಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:55 pm, Fri, 3 July 26

Source link

Leave a Reply

Your email address will not be published. Required fields are marked *