ಮಂಗಳೂರು, (ಜುಲೈ 08): ಎಸ್ಐಆರ್ (SIR)ಕರ್ತವ್ಯಕ್ಕೆ ತೆರಳಿದ ದಲಿತ ಸಮುದಾಯಕ್ಕೆ ಸೇರಿದ ಬಿ.ಎಲ್.ಒ ರನ್ನು(BLO) ಜಾತಿ ನಿಂದನೆ ಮಾಡಿ ಅಪಮಾನಿಸಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಬಿಎಲ್.ಒ. ಆಗಿ ಕೆಲಸ ಮಾಡುತ್ತಿದ್ದು, ಅದರಂತೆ ಶಿರ್ಲಾಲು ಗ್ರಾಮದ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಎಂಬವರ ಮನೆಗೆ ಎಸ್ಐಆರ್ ಪ್ರಕ್ರಿಯೆಗೆಂದು ತೆರಳಿದ್ದರು. ಆದ್ರೆ, ಈ ವೇಳೆ ನಿಮ್ಮ ಜಾತಿಯವರು ಒಳಗೆ ಬರಬಾರದು ಎಂದು ಅಂಗಳದಲ್ಲೇ ನಿಲ್ಲಿಸಿ ಅವಮಾನಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ SC/ST act-2015(u/s-3(1)(r),3(2)(va) ಅಡಿಯಲ್ಲಿ ದೂರು ದಾಖಲಾಗಿದೆ.
ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಬಿಎಲ್.ಒ. ಆಗಿ ಕೆಲಸ ಮಾಡುತ್ತಿದ್ದು, ಜು.6 ರಂದು ಶಿರ್ಲಾಲು ಗ್ರಾಮದ ಪಲ್ಲದೋಡಿ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಕೆಲಸ ಮಾಡುತ್ತಿದ್ದು, ಜು.6 ರಂದು ಶಿರ್ಲಾಲು ಗ್ರಾಮದ ಪಲ್ಲದೋಡಿ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಎಂಬವರ ಮನೆಗೆ ಎ.ಎಲ್.ಒ ಮಾಧವ ಎಂಬರೊಂದಿಗೆ ತೆರಳಿದ್ದರು. ಈ ವೇಳೆ ಮನೆಯ ಅಂಗಳಕ್ಕೆ ಪ್ರವೇಶಿಸಿದಾಗ “ನೀನು ಅಲ್ಲಿಯೇ ನಿಲ್ಲು ನಿಮ್ಮ ಜಾತಿಯವರು ಈ ಕಡೆ ಬರಬಾರದು” ಎಂದು ಹೇಳಿದ ಮನೆಯ ಯಜಮಾನಿ ಯಶೋಧ ಆಚಾರಿ ಮನೆಯ ಸಿಟ್ ಔಟ್ ಗೆ ಪ್ರವೇಶಿಸದಂತೆ ಮೆಟ್ಟಿಲ ಬಳಿ ತಡೆದು ನಿಲ್ಲಿಸಿದ್ದಾರೆ. ಈ ರೀತಿ ಯಶೋಧ ಆಚಾರಿ ಅಪಮಾನ ಮಾಡಿ, ಜಾತಿ ನಿಂದನೆ ಮಾಡಿರುವುದಾಗಿ ಬಿಎಲ್.ಒ. ಜು.7 ರಂದು ಪೊಲೀಸ್ ದೂರು ನೀಡಿದ್ದಾರೆ.
ಇದನ್ನೂ ಓದಿ: ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ: ಆರ್. ಅಶೋಕ್ ಗಂಭೀರ ಆರೋಪ
ಬಿ.ಎಲ್.ಒ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಆರೋಪಿ ಯಶೋಧ ಆಚಾರಿ ವಿರುದ್ಧ SC/ST act-2015(u/s-3(1)(r),3(2)(va)) ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕರ್ನಾಟಕದಲ್ಲಿ ಈ ರೀತಿ ಎಸ್ಐಆರ್ ವೇಳೆ ಜಾತ ನಿಂದನೆ ಮಾಡಿದ ಆರೋಪ ವರದಿಯಾಗಿದ್ದು, ಇದೇ ಮೊದಲ ಪ್ರಕರಣವಾಗಿದೆ.