ಕರ್ನಾಟಕ ಹೈಕೋರ್ಟ್ ನೇಮಕಾತಿ 2026Image Credit source: Getty Images
ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ (Karnataka High Court) ಸಿಹಿಸುದ್ದಿ ನೀಡಿದೆ. 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಒಟ್ಟು 106 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಿಯೂನ್, ವಾಚ್ಮನ್, ಸ್ವೀಪರ್, ಲಿಫ್ಟ್ ಅಟೆಂಡರ್, ಅಸಿಸ್ಟೆಂಟ್ ಬೈಂಡರ್, ಟೈಲರ್ ಹಾಗೂ ಧೋಬಿ ಹುದ್ದೆಗಳು ಇದರಲ್ಲಿ ಸೇರಿವೆ. 10ನೇ ತರಗತಿ (SSLC) ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು 2026ರ ಜುಲೈ 31ರೊಳಗೆ ಕರ್ನಾಟಕ ಹೈಕೋರ್ಟ್ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ:
- ಪಿಯೂನ್ / ವಾಚ್ಮನ್ / ಸ್ವೀಪರ್ 98
- ಲಿಫ್ಟ್ ಅಟೆಂಡರ್- 5
- ಅಸಿಸ್ಟೆಂಟ್ ಬೈಂಡರ್- 1
- ಟೈಲರ್- 1
- ಧೋಬಿ- 1
- ಒಟ್ಟು 106
ವಿದ್ಯಾರ್ಹತೆ ಮತ್ತು ವೇತನ
ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ SSLC / 10ನೇ ತರಗತಿ ಉತ್ತೀರ್ಣರಾಗಿರಬೇಕು.
ಪಿಯೂನ್ / ವಾಚ್ಮನ್ / ಸ್ವೀಪರ್ ರೂ. 19,900 – 63,200
ಲಿಫ್ಟ್ ಅಟೆಂಡರ್- ರೂ. 21,700 – 69,100
ಅಸಿಸ್ಟೆಂಟ್ ಬೈಂಡರ್- ರೂ.19,900 – 63,200
ಟೈಲರ್ – ರೂ.21,700 – 69,100
ಧೋಬಿ- ರೂ. 19,900 – 63,200
ವಯೋಮಿತಿ
ಕನಿಷ್ಠ ವಯಸ್ಸು: 18 ವರ್ಷ
ಗರಿಷ್ಠ ವಯಸ್ಸು: 40 ವರ್ಷ
ವಯೋಮಿತಿ ಸಡಿಲಿಕೆ
SC / ST / ಪ್ರವರ್ಗ-1 ಅಭ್ಯರ್ಥಿಗಳು – 5 ವರ್ಷ
2A / 2B / 3A / 3B ಅಭ್ಯರ್ಥಿಗಳು – 3 ವರ್ಷ
ಅರ್ಜಿ ಶುಲ್ಕ
SC / ST / ಪ್ರವರ್ಗ-1 / PwBD – ರೂ.100
ಸಾಮಾನ್ಯ / 2A / 2B / 3A / 3B – ರೂ.200
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳ ಆಯ್ಕೆ ಈ ಕೆಳಗಿನ ಹಂತಗಳಲ್ಲಿ ನಡೆಯಲಿದೆ.
ಲಿಖಿತ ಪರೀಕ್ಷೆ: ಅಭ್ಯರ್ಥಿಗಳ ಸಾಮಾನ್ಯ ಜ್ಞಾನ, ಭಾಷಾ ಸಾಮರ್ಥ್ಯ ಹಾಗೂ ಮೂಲಭೂತ ಅರ್ಹತೆಯನ್ನು ಪರೀಕ್ಷಿಸಲಾಗುತ್ತದೆ.
ಸಂದರ್ಶನ: ಲಿಖಿತ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಗುತ್ತದೆ.
ದಾಖಲೆ ಪರಿಶೀಲನೆ: ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪರಿಶೀಲಿಸಿ ಅಂತಿಮ ನೇಮಕಾತಿ ಆದೇಶ ನೀಡಲಾಗುತ್ತದೆ.
ಇದನ್ನೂ ಓದಿ: ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 7,925 ಹುದ್ದೆಗಳ ನೇಮಕಾತಿ
ಅರ್ಜಿ ಸಲ್ಲಿಸುವ ವಿಧಾನ:
ಹಂತ 1: ಕರ್ನಾಟಕ ಹೈಕೋರ್ಟ್ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
ಹಂತ 2: Recruitment ವಿಭಾಗದಲ್ಲಿ 2026ರ ಅಧಿಸೂಚನೆಯನ್ನು ಓದಿ.
ಹಂತ 3: ಅರ್ಜಿ ಫಾರ್ಮ್ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
ಹಂತ 4: ಪಾಸ್ಪೋರ್ಟ್ ಗಾತ್ರದ ಫೋಟೋ, ಸಹಿ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
ಹಂತ 5: ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
ಹಂತ 6: ಅರ್ಜಿಯನ್ನು ಸಲ್ಲಿಸಿದ ನಂತರ ಅದರ ಪ್ರಿಂಟ್ ಅಥವಾ ಅರ್ಜಿ ಸಂಖ್ಯೆಯನ್ನು ಸೇವ್ ಮಾಡಿಕೊಳ್ಳಿ
ಅಭ್ಯರ್ಥಿಗಳು ಗಮನಿಸಬೇಕಾದ ವಿಷಯಗಳು:
- ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬೇಕು.
- ಹೆಸರು, ಜನ್ಮ ದಿನಾಂಕ ಹಾಗೂ ಶೈಕ್ಷಣಿಕ ಮಾಹಿತಿಯನ್ನು ಸರಿಯಾಗಿ ನಮೂದಿಸಬೇಕು.
- ತಪ್ಪು ಮಾಹಿತಿ ನೀಡಿದರೆ ಅರ್ಜಿ ತಿರಸ್ಕರಿಸಬಹುದು.
- ಕೊನೆಯ ದಿನಾಂಕದವರೆಗೆ ಕಾಯದೇ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಉತ್ತಮ.
ಅಧಿಕೃತ ವೆಬ್ಸೈಟ್: https://judiciary.karnataka.gov.in
ಸಾಮಾನ್ಯವಾಗಿ ಕೇಳುವ ಪ್ರಶ್ನೆಗಳು ಮತ್ತು ಉತ್ತರಗಳು (FAQs)
ಕರ್ನಾಟಕ ಹೈಕೋರ್ಟ್ ನೇಮಕಾತಿ 2026ರಲ್ಲಿ ಎಷ್ಟು ಹುದ್ದೆಗಳಿವೆ?
ಉತ್ತರ: ಒಟ್ಟು 106 ಹುದ್ದೆಗಳು ಭರ್ತಿಯಾಗಲಿವೆ.
ಅರ್ಜಿ ಸಲ್ಲಿಸಲು ಕನಿಷ್ಠ ವಿದ್ಯಾರ್ಹತೆ ಏನು?
ಉತ್ತರ: SSLC / 10ನೇ ತರಗತಿ ಉತ್ತೀರ್ಣರಾಗಿರಬೇಕು.
ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ ಇದೆಯೇ?
ಉತ್ತರ: ಹೌದು. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?
ಉತ್ತರ: 31 ಜುಲೈ 2026.
ವೇತನ ಎಷ್ಟು ಸಿಗಲಿದೆ?
ಉತ್ತರ: ಹುದ್ದೆಗೆ ಅನುಗುಣವಾಗಿ ರೂ. 19,900 ರಿಂದ ರೂ. 69,100 ಮಾಸಿಕ ವೇತನ ದೊರೆಯಲಿದೆ.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ