Headlines

Karnataka Weather Forecast: ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ! – Kannada News | Karnataka Weather Forecast: Heavy Rain in Coastal Areas, High Speed Winds Forecasted

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ!

ಬೆಂಗಳೂರು, ಜುಲೈ 11: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮತ್ತು ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ (Monsoon) ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ಬಹು ದಿನಗಳಿಂದ ವರುಣನ ಅಬ್ಬರ ಜೋರಾಗಿದ್ದು, ಇಂದೂ ಸಹ ಅದೇ ಪರಿಸ್ಥಿತಿ ಇರಲಿದೆ.

ಕರಾವಳಿ ಕರ್ನಾಟಕ

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದ್ದು, ಬಹುತೇಕ ಎಲ್ಲಾ ಭಾಗಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಈ ಮೂರೂ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರವಾಗಿ ಬಲವಾದ ಗಾಳಿ ಬೀಸಲಿದೆ.

ಉತ್ತರ ಒಳನಾಡು

ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಕೇವಲ ಬಲವಾದ ಗಾಳಿ ಮಾತ್ರ ಬೀಸಲಿದೆ. ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಅಥವಾ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ 30-40 ಕಿಮೀ ವೇಗದ ಗಾಳಿ ಇರಲಿದೆ.

ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣವಾಗಿದ್ದರೂ, ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರವಾಗಿ ಬಲವಾದ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡು

ದಕ್ಷಿಣ ಒಳನಾಡಿನ ಮಲೆನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಬಯಲು ಸೀಮೆ ಜಿಲ್ಲೆಗಳಲ್ಲಿ ಗಾಳಿಯ ತೀವ್ರತೆ ಹೆಚ್ಚಿರಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಲಘುವಾಗಿ ಮಳೆಯಾಗುವ ನಿರೀಕ್ಷೆಯಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಹೆಚ್ಚಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *