Headlines

ಬೈಕ್​​ಗೆ ಸಾರಿಗೆ ಬಸ್​​ ಡಿಕ್ಕಿ: ಹುಮನಾಬಾದ್​​ನಲ್ಲಿ ದುರಂತ ಅಂತ್ಯ ಕಂಡ ಮಗ, ಚಿಕ್ಕಮ್ಮ – Kannada News | Road Horrors: KSRTC Bus Crash Kills Aunt and Nephew in Bidar; Over 30 Injured in Mundgod Bus Lorry Collision

ಬಸ್​​-ಬೈಕ್​​ ನಡುವಿನ ಅಪಘಾತದಲ್ಲಿ ಮೃತ ಮಗ ಮತ್ತು ಚಿಕ್ಕಮ್ಮImage Credit source: Tv9 Kannada

ಬೀದರ್​/ ಮುಂಡಗೋಡ, ಜುಲೈ 12: ಸರ್ಕಾರಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಬೈಕ್​​ನಲ್ಲಿದ್ದ ಇಬ್ಬರು ದುರ್ಮರಣ ಹೊಂದಿರುವ ಘಟನೆ ಬೀದರ್​ ಜಿಲ್ಲೆಯ ಹುಮನಾಬಾದ್ ತಾಲೂಕಿನ ಕಬಿರಾಬಾದ್ ವಾಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ನಡೆದಿದೆ. ಮೃತರನ್ನು ದುಬಲಗುಂಡಿ ಗ್ರಾಮದ ಸವಾರ ಪವನ್(22) ಮತ್ತು ಅವರ ಚಿಕ್ಕಮ್ಮ ನರಸಮ್ಮ ಎಂದು ಗುರಿತಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಪವನ್‌ನ ತಲೆಗೆ ಭಾರಿ ಪ್ರಮಾಣದ ಗಾಯವಾಗಿರೋದು ಕಂಡುಬಂದಿದ್ದರೆ, ಹಿಂದೆ ಕುಳಿತಿದ್ದ ನರಸಮ್ಮ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಾಟಿಮದ್ದು ಹಾಕಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ಅಪಘಾತ

ಕಾಮಾಲೆ ರೋಗಕ್ಕೆ ಔಷಧಿ ತೆಗೆದುಕೊಳ್ಳಲೆಂದು ಮನ್ನಾಏಖೇಳ್ಳಿ ಗ್ರಾಮಕ್ಕೆ ಹೋಗಿದ್ದ ಮಗ, ಚಿಕ್ಕಮ್ಮ ನಾಟಿಮದ್ದು ಹಾಕಿಸಿಕೊಂಡು ಹಿಂತಿರುಗುತ್ತಿದ್ದ ವೇಳೆ ಬೀದರ್-ಕಲಬುರಗಿ ಮಾರ್ಗದ ತಡೆರಹಿತ ಸಾರಿಗೆ ಬಸ್ ಬೈಕ್​​ಗೆ​ ಡಿಕ್ಕಿಯಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಹಳ್ಳಿಖೇಡ್‌ ಆಸ್ಪತ್ರೆಗೆ ರವಾನಿಸಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೀದರ್ ಬ್ರಿಮ್ಸ್ ಆಸ್ಪತ್ರೆ ಅವ್ಯವಸ್ಥೆ: ಕಂತೆ-ಕಂತೆ ಹಣ ನೋಡಿ ಉಪ ಲೋಕಾಯುಕ್ತರು ಶಾಕ್

ಬಸ್​-ಲಾರಿ ಡಿಕ್ಕಿ: ಐವರು ಗಂಭೀರ

Mundagod Bus Lorry Accident

ಬಸ್​-ಲಾರಿ ಮುಖಾಮುಖಿ ಡಿಕ್ಕಿ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕಾವಲಕೊಪ್ಪ ಗ್ರಾಮದ ಶರೀಫಜ್ಜನ ದೇವಸ್ಥಾನದ ಬಳಿ ಬಸ್​​ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಬಸ್​ನಲ್ಲಿದ್ದ 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಗಾಯಾಳುಗಳಿಗೆ ಮುಂಡಗೋಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಗಂಭೀರ ಸ್ಥಿತಿಯಲ್ಲಿರುವವರನ್ನು ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಗೆ ರವಾನಿಸಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್​ನಿಂದ ಮುಂಡಗೋಡಿಗೆ ಹೊರಟಿದ್ದ ಬಸ್ ಮತ್ತು ಮುಂಡಗೋಡಿನಿಂದ ಶಿರಸಿ ಕಡೆ ತೆರಳುತ್ತಿದ್ದ ಲಾರಿ ನಡುವೆ ಅಪಘಾತ ನಡೆದಿದೆ. ಈ ಸಂಬಂಧ ಮುಂಡಗೋಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *