
ಭಾರತ ಹಾಗೂ ಇಂಗ್ಲೆಂಡ್ ಮಹಿಳಾ ತಂಡಗಳ ನಡುವೆ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ 270 ರನ್ಗಳ ದಾಖಲೆಯ ಗೆಲುವು ಸಾಧಿಸಿದೆ. ಲಾರ್ಡ್ಸ್ನಲ್ಲಿ ನಡೆದ ಮೊದಲ ಮಹಿಳಾ ಟೆಸ್ಟ್ ಪಂದ್ಯದಲ್ಲಿ ಮೊದಲ ದಿನದಿಂದಲೂ ಪಾರುಪತ್ಯ ಮೆರೆದ ಟೀಂ ಇಂಡಿಯಾ ಪಂದ್ಯದ ಕೊನೆಯ ದಿನದ ಮೊದಲ ಸೆಷನ್ನಲ್ಲಿ ಇಂಗ್ಲೆಂಡ್ ತಂಡವನ್ನು 186 ರನ್ಗಳಿಗೆ ಆಲೌಟ್ ಮಾಡಿತು. ಈ ಮೂಲಕ ಲಾರ್ಡ್ಸ್ನಲ್ಲಿ ನಡೆದ ಮೊಟ್ಟ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಮೊದಲ ತಂಡವೆಂಬ ದಾಖಲೆಯನ್ನು ಬರೆಯಿತು. ಈ ಪಂದ್ಯದಲ್ಲಿ ಗೆಲುವಿಗೆ 457 ರನ್ಗಳ ಬೃಹತ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ವಿಭಾಗ, ಮೊದಲ ಇನ್ನಿಂಗ್ಸ್ನಂತೆ ಎರಡನೇ ಇನ್ನಿಂಗ್ಸ್ನಲ್ಲೂ ಕಳಪೆ ಪ್ರದರ್ಶನ ನೀಡಿತು. ಇದರ ಪರಿಣಾಮವಾಗಿ ಟೀಂ ಇಂಡಿಯಾ ಅಮೋಘ ಗೆಲುವು ದಾಖಲಿಸಿತು ಹಾಗೆಯೇ ಟಿ20 ಸರಣಿ ಸೋಲಿಗೆ ಸೇಡನ್ನು ತೀರಿಸಿಕೊಂಡಿತು.