ತಾಯಿಯೇ ಪ್ರೀತಿಯೇ ಹಾಗೆ, ವಿವರಿಸಲು ಪದಗಳೇ ಇಲ್ಲ. ಪ್ರಾಣಿಗಳು ಕೂಡ ತನ್ನ ಕಂದಮ್ಮಗಳ ಮೇಲೆ ಕಾಳಜಿ ವಹಿಸುತ್ತವೆ, ತಪ್ಪು ಮಾಡಿದರೆ ಗದರುತ್ತವೆ. ಇದೀಗ ತಾಯಾನೆ (mother elephant) ತನ್ನ ಮರಿಯನ್ನು ಎಷ್ಟು ಕೇರ್ ಮಾಡುತ್ತದೆ ಎನ್ನುವುದಕ್ಕೆ ಸಾಕ್ಷಿಯೆನ್ನುವಂತಿದೆ ಈ ದೃಶ್ಯ. ಹೌದು, ಮರಿಯಾನೆ ರೈಲು ಹಳಿ ದಾಟಲು ಕಷ್ಟ ಪಡುತ್ತಿದೆ. ಇದೇ ವೇಳೆ ತಾಯಿ ಆನೆ ತನ್ನ ಕಂದಮ್ಮನನ್ನು ರೈಲು ಹಳಿ ದಾಟಿಸಿ ತನ್ನ ಜತೆಗೆ ಕರೆದುಕೊಂಡು ಹೋಗಿರುವ ದೃಶ್ಯವು ನೆಟ್ಟಿಗರ ಗಮನ ಸೆಳೆದಿದೆ.
ಎಲಿಫೆಂಟ್ ಸೆಕ್ಯೂರ್ (elephantssecures) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ನಲ್ಲಿ ಆನೆಗಳ ಗುಂಪಿನಲ್ಲಿದ್ದ ಮರಿಯಾನೆಯೊಂದು ರೈಲು ಹಳಿ ದಾಟಲು ಕಷ್ಟ ಪಡುತ್ತಿರುವುದನ್ನು ಕಾಣಬಹುದು. ಈ ಪುಟಾಣಿ ಆನೆಯ ಹಿಂಭಾಗದಲ್ಲಿದ್ದ ತಾಯಾನೆ ತನ್ನ ಕಂದಮ್ಮ ಬೀಳದಂತೆ ತಡೆದಿದೆ. ರೈಲು ಹಳಿ ದಾಟುವುದು ಹೇಗೆಂದು ಮಾರ್ಗದರ್ಶನ ಮಾಡಿದ್ದು, ತನ್ನ ಸೊಂಡಿಲಿನಿಂದ ಮರಿಯಾನೆಯನ್ನು ಮೆಲ್ಲನೆ ಮುಂದಕ್ಕೆ ದೂಡುತ್ತಾ ಹಳಿ ದಾಟಿಸಿರುವುದನ್ನು ದೃಶ್ಯವನ್ನು ಕಾಣಬಹುದು.
ವೈರಲ್ ವಿಡಿಯೋ ಇಲ್ಲಿದೆ
ಇದನ್ನೂ ಓದಿ: ಎದ್ದು ನಿಂತು ನಡೆಯಲು ಪ್ರಯತ್ನಿಸುತ್ತಿದ್ದ ಕಂದಮ್ಮನನ್ನು ಬೀಳದಂತೆ ತಡೆದ ತಾಯಾನೆ
ಈ ವಿಡಿಯೋ ಎಂಟು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಮುದ್ದಾಗಿದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಬುದ್ಧಿವಂತ ಆನೆ ಎಂದಿದ್ದಾರೆ. ಇನ್ನೊಬ್ಬರು, ಆನೆಗೆ ಈ ರೈಲ್ವೆ ಟ್ರ್ಯಾಕ್ ಡೇಂಜರ್ಸ್ ಎಂಬುದು ತಿಳಿದಿದೆ ಎಂದು ಕಾಮೆಂಟ್ ಮಾಡಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ