ಬೆಂಗಳೂರು, ಜುಲೈ 17: ಕರ್ನಾಟಕ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸುಮಾರು ಶೇ.60ರಷ್ಟು ಹೊಸ ಮುಖಗಳಿಗೆ ಅವಕಾಶ ನೀಡಲುಚಿಂತನೆ ನಡೆಸಿದೆ. ಯುವ ಮತ್ತು ಕ್ರಿಯಾಶೀಲ ತಂಡವನ್ನು ರೂಪಿಸುವ ಉದ್ದೇಶವನ್ನು ವರಿಷ್ಠರು ಹೊಂದಿದ್ದಾರೆ ಎನ್ನಲಾಗಿದೆ. ಸಂಪುಟದಲ್ಲಿ ಸ್ಥಾನ ಪಡೆಯುವವರ ಆಯ್ಕೆಗೆ ಹಲವು ಮಾನದಂಡಗಳನ್ನು ಅನುಸರಿಸಲು ನಿರ್ಧರಿಸಲಾಗಿದೆ. ಜಾತಿ, ಸಮಾಜದ ಸ್ಥಿತಿಗತಿಗಳು, ಅಭ್ಯರ್ಥಿಗಳ ಹಿನ್ನೆಲೆ, ಶಿಕ್ಷಣ ಮತ್ತು ಅನುಭವ ಇವುಗಳಲ್ಲಿ ಸೇರಿವೆ. ಹೊಸಬರಿಗೆ ಅವಕಾಶ ನೀಡುವುದರಿಂದ ಪಕ್ಷಕ್ಕೆ ಹೊಸ ನಾಯಕತ್ವ ಸಿಗುತ್ತದೆ ಮತ್ತು ಅವರು ಪಕ್ಷದ ಆಸ್ತಿಯಾಗುತ್ತಾರೆ ಎಂಬ ಅಭಿಪ್ರಾಯ ವರಿಷ್ಠರಿಂದ ವ್ಯಕ್ತವಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.