ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಪ್ರಸ್ತುತ 1-1 ರಲ್ಲಿ ಸಮಬಲಗೊಂಡಿದೆ. ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ಪಂದ್ಯವನ್ನು ಭಾರತ 6 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಏತನ್ಮಧ್ಯೆ, ಕಾರ್ಡಿಫ್‌ನಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ 4 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಸರಣಿಯನ್ನು ಜೀವಂತವಾಗಿರಿಸಿತು. ಇದೀಗ ಲಾರ್ಡ್ಸ್‌ನಲ್ಲಿ ಉಭಯ ತಂಡಗಳ ನಡುವಿನ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸರಣಿ ಕೈಸೇರಲಿದೆ. ಈಗಾಗಲೇ ಟಿ20 ಸರಣಿ ಸೋತಿರುವ ಟೀಂ ಇಂಡಿಯಾ ಏಕದಿನ ಸರಣಿ ಗೆಲುವಿನೊಂದಿಗೆ ಈ ಪ್ರವಾಸಕ್ಕೆ ಅಂತ್ಯ ಹಾಡಲು ನೋಡುತ್ತಿದೆ.
ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ
ಈ ಸರಣಿ ನಿರ್ಧಾರಕ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಇಂಗ್ಲೆಂಡ್ ತಂಡದಲ್ಲಿ 1 ಬದಲಾವಣೆಯಾಗಿದ್ದರೆ, ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆಗಳಾಗಿವೆ. ಜಸ್ಪ್ರೀತ್ ಬುಮ್ರಾ ಗಾಯದ ಕಾರಣದಿಂದಾಗಿ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹಾಗೆಯೇ ವಾಷಿಂಗ್ಟನ್ ಸುಂದರ್ ಕೂಡ ಈ ಮೊದಲೇ ಗಾಯಗೊಂಡು ಪಂದ್ಯದಿಂದ ಹೊರಬಿದ್ದಿದ್ದರು. ಇವರಿಬ್ಬರ ಜೊತೆಗೆ ಶಿವಂ ದುಬೆ ಅವರನ್ನು ಈ ಪಂದ್ಯದಿಂದ ಕೈಬಿಡಲಾಗಿದೆ. ಈ ಮೂವರ ಬದಲಿಗೆ ಕೆಎಲ್ ರಾಹುಲ್, ಪ್ರಿನ್ಸ್ ಯಾದವ್ ಹಾಗೂ ಅರ್ಷದೀಪ್ ಸಿಂಗ್ರನ್ನು ಆಡಿಸಲಾಗುತ್ತಿದೆ.
22 ವರ್ಷಗಳಿಂದ ಗೆಲುವಿನ ಬರ
ವಾಸ್ತವವಾಗಿ ಟೀಂ ಇಂಡಿಯಾಗೆ ಲಾರ್ಡ್ಸ್ ಮೈದಾನವು 1983 ರ ವಿಶ್ವಕಪ್ ಪ್ರಶಸ್ತಿ ಗೆಲುವು ಮತ್ತು 2002 ರ ನ್ಯಾಟ್‌ವೆಸ್ಟ್ ಟ್ರೋಫಿ ಫೈನಲ್‌ನಂತಹ ಸ್ಮರಣೀಯ ನೆನಪುಗಳಿಗೆ ಹೆಸರುವಾಸಿಯಾಗಿದೆ. ಆದರೆ ಕಟು ವಾಸ್ತವವೆಂದರೆ 2004 ರಿಂದ ಟೀಂ ಇಂಡಿಯಾ ಈ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ಒಂದೇ ಒಂದು ಏಕದಿನ ಪಂದ್ಯವನ್ನು ಗೆದ್ದಿಲ್ಲ. ಲಾರ್ಡ್ಸ್‌ನಲ್ಲಿ ಭಾರತದ ಕೊನೆಯ ಏಕದಿನ ಗೆಲುವು ಸೆಪ್ಟೆಂಬರ್ 5, 2004 ರಂದು ಬಂದಿತು, ಆ ಪಂದ್ಯದಲ್ಲಿ ಸೌರವ್ ಗಂಗೂಲಿ ನಾಯಕತ್ವದಲ್ಲಿ ಭಾರತ ತಂಡವು ಇಂಗ್ಲೆಂಡ್ ತಂಡವನ್ನು 23 ರನ್‌ಗಳಿಂದ ಸೋಲಿಸಿತು. ಆ ಐತಿಹಾಸಿಕ ವಿಜಯದ ನಂತರ ಈಗ ಪೂರ್ಣ 22 ವರ್ಷಗಳು ಕಳೆದಿವೆ, ಆದರೆ ಟೀಂ ಇಂಡಿಯಾ ಇನ್ನೂ ಇಲ್ಲಿ ವಿಜಯವನ್ನು ಸವಿದಿಲ್ಲ.
ಉಭಯ ತಂಡಗಳ ಪ್ಲೇಯಿಂಗ್ 11
ಭಾರತ ತಂಡ: ಶುಭ್ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್.
ಇಂಗ್ಲೆಂಡ್ ತಂಡ: ಜಾಕೋಬ್ ಬೆಥೆಲ್, ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೋಶ್ ಟಂಗ್, ಆದಿಲ್ ರಶೀದ್.