ಬೆಂಗಳೂರು, (ಜುಲೈ 23): ಕರ್ನಾಟಕದ ಹಲವೆಡೆ ಕಾಂಗ್ರೆಸ್-ಬಿಜೆಪಿ ನಡುವೆ ಸಂಘರ್ಷ ಏರ್ಪಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ ಹಾಗೂ ಬಿಜೆಪಿ ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತವನ್ನು ಖಂಡಿಸಿ ರಾಜ್ಯದೆಲ್ಲಡೆ ಪ್ರತಿಭಟನೆ ನಡೆಸಿದೆ. ಇನ್ನೊಂದೆಡೆ ಕಾಂಗ್ರೆಸ್ ಸಹ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹಲವೆಡೆ ಭಾರೀ ಪ್ರತಿಭಟನೆ ನಡೆಸಿದ್ದು, ಬಿಜೆಪಿ ಕಚೇರಿಗಳಿಗೆ ಘೇರಾವ್ ಹಾಕಲಾಗಿದೆ. ಹೀಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಪ್ರತಿಭಟನೆಯಿಂದಾಗಿ ಶಿವಮೊಗ್ಗ, ಬೀದರ್, ಕೊಪ್ಪಳ, ಧಾರವಾಡದಲ್ಲಿ ಎರಡೂ ಪಕ್ಷಗಳ ನಡುವೆ ಗಲಾಟೆಗೆ ತಿರುಗಿದೆ. ಅಷ್ಟಕ್ಕೂ ಎಲ್ಲೆಲ್ಲಿ ಏನೇನಾಯ್ತು ಎನ್ನುವ ಡಿಟೇಲ್ಸ್ ಇಲ್ಲಿದೆ.