
ಭಾರತ ಮತ್ತು ಜಿಂಬಾಬ್ವೆ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಇಂದು ಜುಲೈ 25 ರಂದು ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡಕ್ಕೆ ಮತ್ತೊಮ್ಮೆ ಕಳಪೆ ಆರಂಭ ಸಿಕ್ಕಿದೆ(PC-PTI).

ಟೀಂ ಇಂಡಿಯಾ ಪರ ಎಂದಿನಂತೆ ಅಭಿಷೇಕ್ ಶರ್ಮಾ ಹಾಗೂ ವೈಭವ್ ಸೂರ್ಯವಂಶಿ ಇನ್ನಿಂಗ್ಸ್ ಆರಂಭಿಸಿದರು. ಅದರಂತೆ ಮೊದಲ ಓವರ್ನಲ್ಲಿ ಅಭಿಷೇಕ್ ಶರ್ಮಾ ಎರಡು ಬೌಂಡರಿಗಳನ್ನು ಬಾರಿಸುವ ಮೂಲಕ ಉತ್ತಮ ಆರಂಭವನ್ನು ಪಡೆದುಕೊಂಡರು. ಆದರೆ ಎರಡನೇ ಓವರ್ನಲ್ಲೇ ಅಭಿಷೇಕ್ ಅವರ ಇನ್ನಿಂಗ್ಸ್ ಅಂತ್ಯವಾಯಿತು(PC-PTI).

ಬ್ಲೆಸ್ಸಿಂಗ್ ಮುಜರಬಾನಿ ಬೌಲ್ ಮಾಡಿದ ಎರಡನೇ ಓವರ್ನ ಐದನೇ ಎಸೆತದಲ್ಲಿ ಅಭಿಷೇಕ್ ಪಾಯಿಂಟ್ನಲ್ಲಿ ನಿಂತಿದ್ದ ಫಿಲ್ಡರ್ಗೆ ಕ್ಯಾಚಿತ್ತು ನಿರ್ಗಮಿಸಿದರು. ಇದರೊಂದಿಗೆ ಅಭಿಷೇಕ್ ಅವರ ಕಳಪೆ ಫಾರ್ಮ್ ಜಿಂಬಾಬ್ವೆ ವಿರುದ್ಧವೂ ಮುಂದುವರೆದಿದೆ. ಮೊದಲ ಪಂದ್ಯದಲ್ಲಿ ಕೇವಲ 1 ರನ್ಗೆ ಔಟಾಗಿದ್ದ ಅಭಿಷೇಕ್ 2ನೇ ಪಂದ್ಯದಲ್ಲಿ 8 ರನ್ಗಳಿಗೆ ಸುಸ್ತಾದರು(PC-PTI).

ಕೊನೆಯ ಐದು ಇನ್ನಿಂಗ್ಸ್ಗಳಲ್ಲಿ ಅಭಿಷೇಕ್ ಅವರ ಬ್ಯಾಟ್ನಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿಬಂದಿಲ್ಲ. ಜಿಂಬಾಬ್ವೆ ವಿರುದ್ಧದ ಸರಣಿಗೂ ಮುನ್ನ ಇಂಗ್ಲೆಂಡ್ನಲ್ಲಿ ನಡೆದ ಸರಣಿಯ ಕೊನೆಯ ಮೂರು ಪಂದ್ಯಗಳಲ್ಲಿ ಅಭಿಷೇಕ್ ಅವರ ಪ್ರದರ್ಶನ ಕಳಪೆಯಾಗಿತ್ತು. ಅಭಿಷೇಕ್ ಅವರ ಕಳೆದ ಐದು ಇನ್ನಿಂಗ್ಸ್ಗಳ ಪ್ರದರ್ಶನವನ್ನು ನೋಡುವುದಾದರೆ.. ಕ್ರಮವಾಗಿ 8,1,3,16,10 ರನ್ಗಳನ್ನು ಕಲೆಹಾಕಿದ್ದಾರೆ(PC-PTI).

ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಅಭಿಷೇಕ್ 59 ರನ್ಗಳ ಇನ್ನಿಂಗ್ಸ್ ಆಡಿದ್ದನ್ನು ಬಿಟ್ಟರೆ, ಅವರ ಬ್ಯಾಟ್ ಮೌನಕ್ಕೆ ಶರಣಾಗಿದೆ. ಮೊದಲೆರಡು ಪಂದ್ಯಗಳಲ್ಲಿ ಮುಗ್ಗರಿಸಿರುವ ಅಭಿಷೇಕ್ ಅವರನ್ನು ಮೂರನೇ ಪಂದ್ಯದಿಂದ ಹೊರಗಿಡುವ ಸಾಧ್ಯತೆಗಳಿದ್ದು ಅವರ ಬದಲಿಗೆ ಪ್ರಭ್ಸಿಮ್ರಾನ್ಗೆ ಅವಕಾಶ ನೀಡಬಹುದು(PC-PTI).
Published On – 4:55 pm, Sat, 25 July 26