ನವದೆಹಲಿ, (ಜುಲೈ 25): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ (Dharmendra Pradhan Resigns) ನೀಡಿದ್ದಾರೆ. ಈ ಮೂಲಕ ಕೆಲವು ದಿನಗಳಿಂದ ನಡೆಯುತ್ತಿರುವ ಜನತಾ ಕ್ರಾಕೋಚ್ ಜನತಾ ಪಾರ್ಟಿ, ವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಜಯ ಸಂದಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನಂತರ ನಡೆದ ವಿದ್ಯಾರ್ಥಿಗಳ ಆತ್ಮಹತ್ಯೆಯ ಬಳಿಕ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಕೂಗು ಜೋರಾಗಿ ಕೇಳಿ ಬಂದಿತ್ತು. ಅಲ್ಲದೆ ಇದೇ ಕಾರಣ ಮುಂದಿಟ್ಟುಕೊಂಡು ಯುವಸಮೂಹ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಇದೀಗ ಈ ಹೋರಾಟಕ್ಕೆ ಫಲ ಸಿಕ್ಕಿದ್ದು, ಶಿಕ್ಷಣ ಸಚಿವ ಸ್ಥಾನದಿಂದ ಪ್ರಧಾನ್ ಕೆಳಗಿಳಿದಿದ್ದಾರೆ. ಆದರೂ ಸಿಜೆಪಿಗೆ ಸಮಾಧಾನ ಇಲ್ಲ. ಒಂದು ಬೇಡಿಕೆ ಈಡೇರಿದೆ. ಇನ್ನೂ ಎರಡು ಬೇಡಿಕೆ ಈಡೇರಿಸಬೇಕೆಂದು ಬಿಗಿಪಟ್ಟು ಹಿಡಿದಿದೆ. ಹಾಗಾದ್ರೆ, ಇನ್ನೂ ಆ ಎರಡು ಬೇಡಿಕೆಗಳು ಯಾವುವು ಎನ್ನುವ ಡಿಟೇಲ್ಸ್ ವಿಡಿಯೋನಲ್ಲಿದೆ ನೋಡಿ.