ನವದೆಹಲಿ, (ಜುಲೈ 27): ಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಕರ್ನಾಟಕದ ಎಲ್ಲಾ ಸಂಸದರ ಸಭೆ ಅಂತ್ಯವಾಗಿದ್ದು, ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಬಗ್ಗೆ ಚರ್ಚೆಯಾಗಿದೆ. ಇನ್ನು ಸಭೆ ಬಳಿಕ ಬಿಜೆಪಿ ಎಂಪಿ ತೇಜಸ್ವಿ ಸೂರ್ಯ ಮಾತನಾಡಿ, ಸಿಎಂ ಮೊದಲ ಬಾರಿಗೆ ರಾಜ್ಯದ ಸಂಸದರ ಸಭೆ ಕರೆದಿದ್ದರು. ರಾಜ್ಯ ಸರ್ಕಾರದ ಬಾಕಿ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ. ರಾಜ್ಯದ ವಿಚಾರ ಬಂದಾಗ ಪಕ್ಷಾತೀತವಾಗಿ ಕೆಲಸ ಮಾಡುತ್ತೇವೆ. ರಾಜ್ಯದ ವಿಚಾರ ಬಂದಾಗ ನಾವು ಸರ್ಕಾರದ ಜೊತೆ ಇರುತ್ತೇವೆ. ರಾಜ್ಯಕ್ಕಾಗಿ ಪಕ್ಷಾತೀತವಾಗಿ ಕೆಲಸ ಮಾಡುವುದು ನಮ್ಮ ಕರ್ತವ್ಯ ಎಂದರು.