Headlines

Karnataka Cabinet Expansion: ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ – Kannada News | Zameer Ahmed Khan Summoned to Delhi Amidst Karnataka Cabinet Expansion Buzz

ಬೆಂಗಳೂರು, ಜುಲೈ 29: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು ತೀವ್ರಗೊಂಡಿದ್ದು, ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳಿಂದ ತೀವ್ರ ಲಾಬಿ ನಡೆಯುತ್ತಿದೆ. ಈ ನಡುವೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ತುರ್ತು ಬುಲಾವ್ ಬಂದಿದೆ. ರಣದೀಪ್ ಸುರ್ಜೇವಾಲ ಅವರು ಜಮೀರ್ ಅಹ್ಮದ್ ಖಾನ್ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದು, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ಸಿದ್ದರಾಮಯ್ಯನವರ ಹಿಂದಿನ ಅವಧಿಯಲ್ಲಿ ವಸತಿ ಖಾತೆ ಸಚಿವರಾಗಿದ್ದ ಜಮೀರ್, ಈ ಬಾರಿಯೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಆದರೆ, ಅಲ್ಪಸಂಖ್ಯಾತ ಸಮುದಾಯದಿಂದಲೂ ಎನ್.ಎ. ಹ್ಯಾರಿಸ್, ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್, ತನ್ವೀರ್ ಸೇಠ್ ಅವರಂತಹ ಹಲವು ನಾಯಕರು ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ. ದಾವಣಗೆರೆ ಘಟನೆಗೆ ಕ್ಷಮೆ ಯಾಚಿಸಿರುವ ಜಮೀರ್, ಹೈಕಮಾಂಡ್ ಮಟ್ಟದಲ್ಲಿ ತಮ್ಮ ಪ್ರಭಾವ ಬಳಸಲು ಪ್ರಯತ್ನಿಸುತ್ತಿದ್ದಾರೆ. ಈ ದೆಹಲಿ ಭೇಟಿಯು ಅವರಿಗೆ ಸಚಿವ ಸ್ಥಾನ ಖಚಿತಪಡಿಸುತ್ತದೆಯೇ ಅಥವಾ ಪಕ್ಷ ಸಂಘಟನೆಗೆ ಸಂಬಂಧಿಸಿದ್ದೇ ಎಂಬ ಕುತೂಹಲ ಮೂಡಿಸಿದೆ. ಹೈಕಮಾಂಡ್‌ನ ಅಂತಿಮ ನಿರ್ಧಾರದ ಮೇಲೆ ಅವರ ಭವಿಷ್ಯ ನಿಂತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *