Headlines

ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ

ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ

ಮೈಸೂರು, ಜುಲೈ 30: ಆಗಸ್ಟ್ 1ರಂದು ಪ್ರಧಾನಿ ನರೇಂದ್ರ ಮೋದಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ವಿವೇಕ ಸ್ಮಾರಕ ಹಾಗೂ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. 1892ರಲ್ಲಿ ಸ್ವಾಮಿ ವಿವೇಕಾನಂದರು ತಂಗಿದ್ದ ಐತಿಹಾಸಿಕ ಸ್ಥಳದಲ್ಲಿ ಈ ಸ್ಮಾರಕ ನಿರ್ಮಿಸಲಾಗಿದೆ. ಪ್ರಧಾನಿ ಮೋದಿ ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್‌ಗಳಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಓವಲ್ ಮೈದಾನಕ್ಕೆ ಬರಲಿದ್ದಾರೆ. ಇದಕ್ಕಾಗಿ ಮೂರು ತಾತ್ಕಾಲಿಕ ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿದ್ದು, ಹೆಲಿಕಾಪ್ಟರ್ ಇಳಿಯುವಿಕೆಯ ಟ್ರಯಲ್ ರನ್‌ಗಳನ್ನು ಈಗಾಗಲೇ ನಡೆಸಲಾಗುತ್ತಿದೆ. ಭದ್ರತಾ ದೃಷ್ಟಿಯಿಂದ, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ, ಎಸ್ಪಿಜಿ ಕಮಾಂಡೋಗಳು ಮತ್ತು ಸ್ಥಳೀಯ ಪೊಲೀಸರೊಂದಿಗೆ ಸಮಗ್ರ ಪರಿಶೀಲನೆ ನಡೆಸಲಾಗುತ್ತಿದೆ. ಪ್ರಧಾನಿ ಸಂಚರಿಸುವ ಎಲ್ಲಾ ರಸ್ತೆಗಳಲ್ಲೂ ಬಿಗಿ ಭದ್ರತೆ ಒದಗಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *